ಕುಗ್ರಾಮ ಬುಲ್ಡೋಜರ್ ಗುಡ್ಡ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ – ಹಳ್ಳಿಯ ಕಡೆ ಕಾರ್ಯಕ್ರಮ :

ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಮಹಾತ್ವಾಕಾಂಕ್ಷಿ ಯೋಜನೆಯೇ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ಕಾರ್ಯಕ್ರಮದ ಮೂಲ ಉದ್ದೇಶ ಎಂದು ತಹಶೀಲ್ದಾರ್ ವಿ ಎಸ್ ರಾಜೀವ್ ಹೇಳಿದರು.

ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಅಯೋಜಿಸಲಾದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಮಹಾತ್ವಾಕಾಂಕ್ಷಿ ಯೋಜನೆಯಾದ ಹಲವು ಸರ್ಕಾರ ಜನಪರ ಕಾರ್ಯಕ್ರಮಗಳಾದ ಸಂದ್ಯಾಸುರಕ್ಷಾ,ವಿಧುವಾ ವೇತನ ಮನಸ್ವಿನಿ ಸಾಮಾಜಿಕ ಭದ್ರತಾಯೋಜನೆ ಅಂಗವಿಕಲ ವೇತನ ಸೇರಿದಂತೆ ಪೌತಿ ಬದಲಾವಣೆ ಖಾತೆ ಬದಲಾವಣೆ ಸರ್ಕಾರಿ ಅಕ್ರಮ ಜಮೀನು ತೆರವುಗೊಳಿಸುವುದು ಮತ್ತು ಬಿಪಿಎಲ್ ಕಾರ್ಡ್ ದೊರೆಯುತ್ತಿರುವ ಬಗ್ಗೆ ಖಾತರಿ ಪಡಿಸುವುದು. ಕಂದಾಯ ಗ್ರಾಮಗಳ ರಚನೆ, ದರಖಾಸ್ತು ಪೋಡಿ, ಪೋಡಿ ಮುಕ್ತ ಗ್ರಾಮ, ಹದ್ದುಬಸ್ತು, ಅತಿವೃಷ್ಠಿ ಅನಾವೃಷ್ಟಿ ಎದುರಿಸಲು ಮುಂಜಾಗ್ರತಾ ಕ್ರಮ, ಮತದಾರರ ಪಟ್ಟಿ ಪರಿಷ್ಕರಣೆ, ಎಸ್‌ಸಿ, ಎಸ್,ಟಿ ಬಿಸಿಎಂ ವಸತಿ ನಿಲಯಗಳಿದ್ದಲಿ ಭೇಟಿ ನೀಡಿ ಸುಸ್ಥಿತಿಯಲ್ಲಿರುವ ಬಗ್ಗೆ ಕ್ರಮ ವಹಿಸುವುದು. ಹೀಗ ಸರ್ಕಾರದ ಅಭಿವೃದ್ದಿ ಕಾರ್ಯಕ್ರಮಗಳಿಗೆ ಕಾಯಕಲ್ಪ ನೀಡುವುದು ಈ ಯೋಜನೆಯ ಗುರಿಯಾಗಿದೆ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ರೈತ ನಾಗರಿಕರಿಗೆ ವಿವರಿಸಿ ಮಧ್ಯವರ್ತಿಗಳಿಂದ ನಾಗರೀಕರು ನಿತ್ಯ ಕಛೇರಿಗೆ ಅಲೆದಂತೆ ನೇರವಾಗಿ ಸಂಬಂಧಪಟ್ಟ ಎಲ್ಲಾ ಇಲಾಕಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸ್ಥಳದಲ್ಲಿ ತಮ್ಮ ಸಮಸ್ಯೆಗೆ ಪರಿಹಾರ ಪಡೆಯಲು ಅವಕಾಶ ನೀಡಲಾಗಿದೆ ಎಂದರು.

ನಂತರ ಗ್ರಾಮಸ್ಥರು ತಹಶೀಲ್ದಾರರಿಗೆ ತಮ್ಮ ಬೇಡಿಕೆಗಳ ಮನವಿಗಳನ್ನು ಸಲ್ಲಿಸಿದರು.

>ಕೋಡೂರು ಗ್ರಾಪಂ ಅಧ್ಯಕ್ಷರಾದ ಸುನಂದಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಗ್ರಾ.ಪಂ.ಉಪಾಧ್ಯಕ್ಷ ಜಯಪ್ರಕಾಶ್‌ಶೆಟ್ಟಿ, ಸದಸ್ಯರಾದ ಅನ್ನಪೂರ್ಣ ಮಹೇಶ, ಯೋಗೇಂದ್ರ, ಶೇಖರಪ್ಪ, ರೇಖಾ, ಪ್ರೀತಿ, ಸವಿತಾ, ಮಂಜಪ್ಪ, ಸುಧಾಕರ, ಉಮೇಶ್, ಸರ್ವೇ ಇಲಾಖೆಯ ಅಧಿಕಾರಿಗಳು, ಆಹಾರ ನಿರೀಕ್ಷಕ ಬಾಲಚಂದ್ರ, ಉಪತಹಶೀಲ್ದಾರ್ ಹೆಚ್.ಟಿ.ಹುಚ್ಚರಾಯಪ್ಪ, ಸುಧೀರ್ ಕುಮಾರ್, ಶ್ರೀಕಾಂತ್, ಸಿಡಿಪಿಓ ಇಲಾಖೆಯ ಮೇಲ್ವಿಚಾರಕಿ ವನಮಾಲಾ, ಇನ್ನಿತರರು ಪಾಲ್ಗೊಂಡಿದ್ದರು.

ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಹಾಗೂ ಪೊಲೀಸ್ ಇಲಾಖೆಯ ಗೈರು ಹಾಜರಿ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ದಿನದಲ್ಲಿ ಕೇವಲ ಎರಡು ಗಂಟೆಯೂ ವಿದ್ಯುತ್ ಇರುವುದಿಲ್ಲ ನಾವುಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಸಾರ್ವಜನಿಕರು ಮೆಸ್ಕಾಂ ಇಲಾಖೆಯ ವಿರುದ್ಧ ಸಿಡಿಮಿಡಿಗೊಂಡರು.

ಕಾರ್ಯಕ್ರಮದ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

8 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

10 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

11 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

11 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago