ರಿಪ್ಪನ್ಪೇಟೆ : ಇಲ್ಲಿನ ಕೆಂಚನಾಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಬಲವಂತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೆಂಚನಾಳ ಗ್ರಾಮದಲ್ಲಿ ಸರ್ವೆ ನಂಬರ್ 38/1 ರಲ್ಲಿ ಜಯಲಕ್ಷ್ಮೀ ಎಂಬುವರು ತಮ್ಮ ಸ್ವಂತ ತೋಟದಲ್ಲಿ ಕೆಲಸ ಮಾಡುವ ವೇಳೆ ಸಂಬಂಧಿಕರಾದ ಮಂಜಪ್ಪ ಮತ್ತು ಸಂಗೀತ ಎಂಬುವರು ಏಕಾಏಕಿ ತೋಟಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಮಹಿಳೆಯನ್ನ ಅವ್ಯಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾರೆ.
ನಿನಗೆ ಯಾರೂ ಇಲ್ಲ ನಿನಗೆ ಜಮೀನು ಏನಕ್ಕಾಗಿ.. ನಾವುಗಳೆಲ್ಲಾ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಂತೆ ನೀನು ಸಹ ಮತಾಂತರಗೊಂಡರೆ ನಿನಗೆ ಜೀವನ ಮಾಡಲು ಬಿಡುತ್ತೇವೆ. ಇಲ್ಲವಾದಲ್ಲಿ ನಿನ್ನ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ.
ಈ ಸಂಧರ್ಭದಲ್ಲಿ ಜಯಲಕ್ಷ್ಮೀ ಯ ಪತಿ ದಿ.ರಾಜು ರವರ ಸಹೋದರ ಸಂಜಯ್ ಮತ್ತು ನಾಗರತ್ನ ರವರು ಸಹ ಮತಾಂತರಗೊಳ್ಳುವಂತೆ ಜಯಲಕ್ಷ್ಮಿ ರವರಿಗೆ ಬಲವಂತ ಮಾಡಿದ್ದಾರೆ.
ಈ ವೇಳೆ ಅಲ್ಲೇ ಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದ ರಾಜೇಗೌಡ ಮತ್ತು ಇಮಾಮ್ ಸಾಬ್ ಅವರು ಜಗಳ ಬಿಡಿಸಿ ಈ ಬಗ್ಗೆ ಪಂಚಾಯಿತಿ ನಡೆಸುವುದಾಗಿ ಸಲಹೆ ನೀಡಿದ್ದರು.
ಪಂಚಾಯಿತಿ ನಡೆಯದ ಕಾರಣ ಎರಡು ದಿನ ಕಾದು ನಂತರ ಜಯಲಕ್ಷ್ಮೀ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್