ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.
ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು.
ಇಂದು ಹೂವು ಕೊಟ್ಟು ಬೈಕ್ ನಲ್ಲಿ ವಾಪಾಸ್ ಬರುವ ವೇಳೆ ನ್ಯೂ ಮಂಡ್ಲಿ ಮೊದಲನೇ ತಿರುವಿನ ಬಳಿ ಮೂರು ಜನ ಅನ್ಯ ಕೋಮಿನ ಯುವಕರು ತಡೆದಿದ್ದಾರೆ.ಏಕೆ ತಡೆದಿದ್ದೀರಿ ಎಂದು ಕೇಳಿದ್ದಕ್ಕೆ ಒಬ್ಬ ಏಕಾಏಕಿ ಹಲ್ಲೆ ನಡೆಸಿದ್ದಾನೆ. ನಂತರ ಮೂವರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಹಿಂತಿರುಗಿ ನೋಡಿದಾಗ ಇತರೆ ಮೂವರು ಹುಡುಗರು ಲಾಂಗು ಮಚ್ಚು ಝಳಪಿಸುತ್ತಾ ಹಲ್ಲೆ ನಡೆಸಲು ಮುಂದಾಗಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಮಧು ಮೂವರನ್ನು ತಳ್ಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾನೆ.
ನಂತರ ಸ್ನೇಹಿತರಿಗೆ ಸ್ನೇಹಿತರಿಗೆ ವಿಷಯ ಹೇಳಿದ್ದಾನೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಹಿಂದೂ ಸಂಘಟನೆಯ ಧೀನ್ ದಯಾಳು ಮೆಗ್ಗಾನ್ ಗೆ ಭೇಟಿ ನೀಡಿ ಮಧು ಆರೋಗ್ಯವನ್ನು ವಿಚಾರಿಸಿದ್ದಾರೆ.
ಮಧುವಿಗೆ ಈ 7 ತಿಂಗಳ ಹಿಂದಷ್ಟೆ ಲಿವರ್ ಆಪರೇಷನ್ ಆಗಿತ್ತು ಎಂದು ಹೇಳಲಾಗುತ್ತಿದೆ. ಆಪರೇಷನ್ ಆದ ಜಾಗಕ್ಕೆ ಮತ್ತೆ ಹೊಡೆತಬಿದ್ದಿದೆ. ಪ್ರಾಣಾಪಾಯದಿಂದ ಸಧ್ಯಕ್ಕೆ ಮಧು ಪಾರಾಗಿದ್ದಾನೆ.
ಈ ಹಲ್ಲೆಗೆ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಬದಲಿಗೆ ನ್ಯೂಮಂಡ್ಲಿ ಮೂರನೇ ತಿರುವಿನಲ್ಲಿ ಗಾಂಜಾ ಸೇವಿಸುತ್ತಿದ್ದ ಹಲ್ಲೇಕೋರರಿಗೆ ಮಧು ಈ ಹಿಂದೆ ಬುದ್ದಿ ಹೇಳಿದ್ದ. ಬುದ್ದಿ ಹೇಳಿದ್ದಕ್ಕೆ ಈ ದಾಳಿ ಆಗಿರ ಬಹುದು ಎಂದು ಅನುಮಾನಿಸಲಾಗುತ್ತಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್