ಶಿವಮೊಗ್ಗ ಡಿಸಿಸಿ ಬ್ಯಾಂಕ್’ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಡಿಸಿಸಿ ಬ್ಯಾಂಕ್’ನಲ್ಲಿ 98 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಹಸ್ತದಲ್ಲಿ ಅಥವಾ ಕಂಪ್ಯೂಟರ್ ಮೂಲಕ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು. ಪೂರ್ಣ ವಿವರ, ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕೃತ ಪ್ರತಿ ಹಾಗೂ ಅರ್ಜಿ ಶುಲ್ಕದೊಂದಿಗೆ ಪಾವತಿಸಬೇಕು.2022ರ ಮೇ 16ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
1) ಆಪ್ತ ಸಹಾಯಕರು / ಶೀಘ್ರ ಲಿಪಿಗಾರರು 1 ಹುದ್ದೆ ಇದೆ. ವೇತನ ಶ್ರೇಣಿ 33,450 ರೂ.ನಿಂದ 62,600 ರೂ. ಇದೆ.
2) ಕಿರಿಯ ಸಹಾಯಕರು / ಕ್ಷೇತ್ರಾಧಿಕಾರಿಗಳು / ನಗದು ಗುಮಾಸ್ತರು 73 ಹುದ್ದೆಗಳಿವೆ. ವೇತನ ಶ್ರೇಣಿ 30350 ರೂ.ನಿಂದ 58250 ರೂ. ಇದೆ.
3) ವಾಹನ ಚಾಲಕರು 1 ಹುದ್ದೆ ಇದೆ. ಇದರ ವೇತನ ಶ್ರೇಣಿ 27650 ರೂ. ನಿಂದ 52650 ರೂ.ವರೆಗೂ ಇದೆ.
4) ಅಟೆಂಡರ್ 22 ಹುದ್ದೆಗಳಿವೆ. ಇದರ ವೇತನ ಶ್ರೇಣಿ 23500 ರೂ. ನಿಂದ 47650 ರೂ.ವರೆಗೂ ಇದೆ.
5) ಜಲಗಾರರು 1 ಹದ್ದೆ ಇದೆ. ಇದರ ವೇತನ ಶ್ರೇಣಿ 17 ಸಾವಿರ ರೂ.ನಿಂದ 28950 ರೂ.ವರೆಗೆ ಇದೆ.
ಇನ್ನೂ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಬಳಸಿ : 👇👇👇👇
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್