Headlines

ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

About The Author

Leave a Reply

Your email address will not be published. Required fields are marked *