January 11, 2026

ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಮಾಡಿದ ನಾಲ್ವರ ಬಂಧನ!!!!!

ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ  ಗೊಠಾಣೆ ಗ್ರಾಮದ  ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ(Sahydari Tiger Reserve) ಬಂಗಾಳ ಮಾನಿಟರ್ ಹಲ್ಲಿಯ (bengal monitor lizard ) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್‌ಗೆ ಪ್ರವೇಶಿಸಿ ಅಪರಾಧ ಎಸಗಿದ್ದಾರೆ.ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನಿಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ ಅರಣ್ಯ ಇಲಾಖೆ ಆರೋಪಿಯ ಮೊಬೈಲ್‌ ಪರಿಶೀಲಿಸಿದಾಗ ಘಟನೆಯ ಬಗ್ಗೆ ತಿಳಿದು ಬಂದಿದೆ.


ಆರೋಪಿಗಳು ಮಾನಿಟರ್ ಹಲ್ಲಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯದ ದಾಖಲೆಯನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ.

ಸಾಂಗ್ಲಿ ಮೀಸಲು ಅರಣ್ಯದಲ್ಲಿ ನಿಯೋಜಿಸಲಾದ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿಗಳನ್ನು ಪತ್ತೆಹಚ್ಚಿದರು, ಅದರಲ್ಲಿ ಅವರು ಕಾಡಿನಲ್ಲಿ ತಿರುಗುತ್ತಿರುವುದನ್ನು ಕಾಣಬಹುದಾಗಿತ್ತು. ಮಾಹಿತಿಗಳ ಪ್ರಕಾರ, ಮೂವರು ಆರೋಪಿಗಳು ಕೊಂಕಣದಿಂದ ಕೊಲ್ಲಾಪುರ ಚಂದೋಳಿ ಗ್ರಾಮಕ್ಕೆ ಬೇಟೆಗೆ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಗೊಂದಲಕ್ಕೊಳಗಾಗಿರುವ ಅರಣ್ಯಾಧಿಕಾರಿಗಳು, ಆರೋಪಿಗಳ ವಿರುದ್ಧದ ಯಾವ ರೀತಿಯ ಅರೋಪಗಳನ್ನು ಹಾಕಬೇಕು ಎನ್ನುವ ಕುರಿತು ಭಾರತೀಯ ದಂಡ ಸಂಹಿತೆಯನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಗಾಳದ ಮಾನಿಟರ್ ಹಲ್ಲಿ ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರ ಅಡಿಯಲ್ಲಿ ಮೀಸಲು ಜಾತಿಯಾಗಿದೆ. ತಪ್ಪಿತಸ್ಥರಾದರೆ, ಆರೋಪಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದು.

About The Author

Leave a Reply

Your email address will not be published. Required fields are marked *

Exit mobile version