ಸಾಗರ: ಟೌನ್ ಮತ್ತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಚಂದ್ರ ಬಳೆಗಾರ್ ತಂದೆ ಲೇಟ್, ಅಣ್ಣಪ್ಪ, 28 ವರ್ಷ, ಸೆಂಟಿಂಗ್ ಕೆಲಸ ವಾಸ ಉಳವಿ ಗ್ರಾಮ ಸೊರಬ ತಾಲ್ಲೂಕು ಈತನನ್ನು ದಸ್ತಗಿರಿ ಮಾಡಿ, ವಿಚಾರಣೆ ಮಾಡಿದಾಗ, ಆರೋಪಿತನು ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ 2 ಮತ್ತು ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗೌತಮಪುರ ಗ್ರಾಮದಲ್ಲಿ 1 ಮನೆಗಳನ್ನು ಕಳ್ಳತನ ಮಾಡಿದ್ದಾಗಿ ಹೇಳಿಕೆ ನೀಡಿದ್ದರಿಂದ, ಆರೋಪಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮಾನ್ಯ ನ್ಯಾಯಾಲಯದಿಂದ ಆದೇಶದ ರೀತ್ಯಾ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ಆರೋಪಿತನಿಂದ ಸುಮಾರು 2,50,000/ರೂ ಮೌಲ್ಯದ 2 ಕೆಜಿಗೂ ಅಧಿಕ ಬೆಳ್ಳಿಯ ಆಭರಣಗಳನ್ನು ಮತ್ತು 20,000/ರೂ ಮೌಲ್ಯದ ಬಂಗಾರದ ಆಭರಣಗಳನ್ನು ಮತ್ತು ಕಳವು ಮಾಡಲು ಉಪಯೋಗಿಸುತ್ತಿದ್ದ 90,000/ರೂ ಮೌಲ್ಯದ ಪಲ್ಸರ್ ಬೈಕನ್ನು ಅಮಾನತ್ತುಪಡಿಸಿಕೊಂಡು ಆರೋಪಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಲಕ್ಷ್ಮೀ ಪ್ರಸಾದ್ ಐಪಿಎಸ್ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಶ್ರೀವಿಕ್ರಮ್ ಅಮತೆ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ , ರವರು ಮನೆ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲು ಆದೇಶಿಸಿದ ಮೇರೆಗೆ ಶ್ರೀ.ರೋಹನ್ ಜಗದೀಶ್ ಐಪಿಎಸ್ ಮಾನ್ಯ ಸಹಾಯಕ ಪೊಲೀಸ್ ಅಧೀಕ್ಷಕರು ಸಾಗರ ಉಪ ವಿಭಾಗ ಸಾಗರ ಮತ್ತು ಕಾರ್ಗಲ್ ಸರ್ಕಲ್ ಪೊಲೀಸ್ ಇನ್ಸಪೆಕ್ಟರ್, ಪ್ರಭಾರ ಸಾಗರ ಟೌನ್ ಪೊಲೀಸ್ ಠಾಣೆ ಶ್ರೀ ಕೃಷ್ಣಪ್ಪ ಕೆ.ವಿ. ರವರ ಮಾರ್ಗದರ್ಶನದಲ್ಲಿ ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀ ತಿರುಮಲೇಶ್.ಜಿ, ಮತ್ತು ಸಾಗರ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಟಿ.ಡಿ.ಸಾಗರ್ ಕರ್ ರವರ ನೇತೃತ್ವದಲ್ಲಿ ಸಾಗರ ಟೌನ್ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂಧಿಗಳಾದ ರತ್ನಾಕರ್, ಸಂತೋಷ್ ನಾಯ್ಕ, ಹಜರತ್ ಅಲಿ, ಶ್ರೀಧರ್, ಅಶೋಕ್, ರವರನ್ನು ಒಳಗೊಂಡ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ.
ಸಾಗರ ಟೌನ್ ಮತ್ತು ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸಿ ಯಶಸ್ವಿಯಾದ ತಂಡಕ್ಕೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಅಭಿನಂದನೆ ಸಲ್ಲಿಸಿರುತ್ತಾರೆ.