ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಸಾಗರ ಪೊಲೀಸರು :

ಸಾಗರ: ಟೌನ್ ಮತ್ತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಚಂದ್ರ ಬಳೆಗಾರ್  ತಂದೆ ಲೇಟ್, ಅಣ್ಣಪ್ಪ, 28 ವರ್ಷ, ಸೆಂಟಿಂಗ್ ಕೆಲಸ ವಾಸ ಉಳವಿ ಗ್ರಾಮ ಸೊರಬ ತಾಲ್ಲೂಕು ಈತನನ್ನು ದಸ್ತಗಿರಿ ಮಾಡಿ, ವಿಚಾರಣೆ ಮಾಡಿದಾಗ, ಆರೋಪಿತನು ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ 2 ಮತ್ತು ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗೌತಮಪುರ ಗ್ರಾಮದಲ್ಲಿ 1 ಮನೆಗಳನ್ನು ಕಳ್ಳತನ ಮಾಡಿದ್ದಾಗಿ ಹೇಳಿಕೆ ನೀಡಿದ್ದರಿಂದ, ಆರೋಪಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮಾನ್ಯ ನ್ಯಾಯಾಲಯದಿಂದ ಆದೇಶದ ರೀತ್ಯಾ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ಆರೋಪಿತನಿಂದ ಸುಮಾರು 2,50,000/ರೂ ಮೌಲ್ಯದ 2 ಕೆಜಿಗೂ ಅಧಿಕ ಬೆಳ್ಳಿಯ ಆಭರಣಗಳನ್ನು ಮತ್ತು 20,000/ರೂ ಮೌಲ್ಯದ ಬಂಗಾರದ ಆಭರಣಗಳನ್ನು ಮತ್ತು ಕಳವು ಮಾಡಲು ಉಪಯೋಗಿಸುತ್ತಿದ್ದ 90,000/ರೂ ಮೌಲ್ಯದ ಪಲ್ಸರ್ ಬೈಕನ್ನು ಅಮಾನತ್ತುಪಡಿಸಿಕೊಂಡು ಆರೋಪಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಲಕ್ಷ್ಮೀ ಪ್ರಸಾದ್ ಐಪಿಎಸ್ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಶ್ರೀವಿಕ್ರಮ್ ಅಮತೆ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ , ರವರು ಮನೆ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲು ಆದೇಶಿಸಿದ ಮೇರೆಗೆ ಶ್ರೀ.ರೋಹನ್ ಜಗದೀಶ್ ಐಪಿಎಸ್ ಮಾನ್ಯ ಸಹಾಯಕ ಪೊಲೀಸ್ ಅಧೀಕ್ಷಕರು ಸಾಗರ ಉಪ ವಿಭಾಗ ಸಾಗರ ಮತ್ತು ಕಾರ್ಗಲ್ ಸರ್ಕಲ್ ಪೊಲೀಸ್ ಇನ್ಸಪೆಕ್ಟರ್, ಪ್ರಭಾರ ಸಾಗರ ಟೌನ್ ಪೊಲೀಸ್ ಠಾಣೆ ಶ್ರೀ ಕೃಷ್ಣಪ್ಪ ಕೆ.ವಿ. ರವರ ಮಾರ್ಗದರ್ಶನದಲ್ಲಿ ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀ ತಿರುಮಲೇಶ್.ಜಿ, ಮತ್ತು ಸಾಗರ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಟಿ.ಡಿ.ಸಾಗರ್ ಕರ್ ರವರ ನೇತೃತ್ವದಲ್ಲಿ ಸಾಗರ ಟೌನ್ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂಧಿಗಳಾದ ರತ್ನಾಕರ್, ಸಂತೋಷ್ ನಾಯ್ಕ, ಹಜರತ್ ಅಲಿ, ಶ್ರೀಧರ್‌, ಅಶೋಕ್, ರವರನ್ನು ಒಳಗೊಂಡ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ.
ಸಾಗರ ಟೌನ್ ಮತ್ತು ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸಿ ಯಶಸ್ವಿಯಾದ ತಂಡಕ್ಕೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಅಭಿನಂದನೆ ಸಲ್ಲಿಸಿರುತ್ತಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

7 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

9 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

10 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

10 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

11 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago