ಮನೆ ಮೇಲೆ ಬಿದ್ದ ಮರ : ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಮತ್ತು ಮಗು ಪಾರು

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ.

ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ ಪರಿಶೀಲನೆ ಮಾಡಿ ಹೋಗಿರುತ್ತಾರೆ.


ಹಾನಿಗೊಳಗಾದ ಕುಟುಂಬ ಅತ್ಯಂತ ಕಡು ಬಡತನದಲ್ಲಿ ಕೂಲಿ ಕಾರ್ಮಿಕ ವರ್ಗಕ್ಕೆ ಸೇರಿದ್ದು ವಾಸಿಸಲು ಮನೆಯಿಲ್ಲದೆ ಅತಂತ್ರ ಸ್ಥಿತಿಯಲ್ಲಿ ಇದ್ದಾರೆ.
ಸಾಮಾಜಿಕವಾಗಿ ಸಹಾಯಮಾಡುವ ಜನಪ್ರತಿನಿಧಿಗಳು ಇವರಿಗೆ ಸೂರು ಕಲ್ಪಿಸಿಕೊಟ್ಟಲ್ಲಿ ಬಡಕುಟುಂಬಕ್ಕೆ ಆಸರೆ ಆಗುತ್ತದೆ.

ಮುಂಬರುವ ಮಳೆಗಾಲಕ್ಕೆ ಹೆದರಿ ಹೇಗೆ ವಾಸ ಮಾಡಬೇಕು ಎಂಬ ಚಿಂತೆ ಈ ಬಡ ಕೂಲಿಕಾರ್ಮಿಕರ ಮನೆಯಲ್ಲಿದೆ ಚಿಕ್ಕ ಮಕ್ಕಳು ಹೇಗೆ ಜೀವನ ಕಳೆಯಬೇಕು ಎಂಬುದೇ ಇವರ ಚಿಂತೆಯಾಗಿದೆ.

ಸ್ಥಳೀಯ ಗ್ರಾಮ ಪಂಚಾಯತಿಯಿಂದ ಯಾವುದೇ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡದೇ ಇರುವುದು ಇವರ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

. ಇನ್ನಾದರೂ ಚಿಕ್ಕ ಜೇನಿ ಗ್ರಾಮ ಪಂಚಾಯತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಬಂಧಪಟ್ಟ ಜನಪ್ರತಿನಿಧಿಗಳು ಬಡಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಟ್ಟಲ್ಲಿ ಅವರ ಕಾರ್ಯಕ್ಷಮತೆಗೆ ಬೆಲೆ ಬರಬಹುದು ಎಂಬ ನಂಬಿಕೆ ಸಾರ್ವಜನಿಕರಲ್ಲಿದೆ.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

24 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

24 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago