ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ.
ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು.

ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು. ಆದರೆ ಒಂದು ಬದಿಯಿಂದ ಇಂತಹ ಆಘಾತ, ಹೊಡೆತ. ಇನ್ನೊಂದು ಕಡೆಯಿಂದ ಸದಾಕಾಲ ತಗ್ಗಿ-ಬಗ್ಗಿ ನಡಿಬೇಕೆಂದು ಆಶಿಸುವುದು. ಇದು ಎಷ್ಟರ ಮಟ್ಟಿನ ನ್ಯಾಯ ಎಂದು ಪ್ರಶ್ನಿಸಿದರು.

ಎರಡು ಕಡೆ ಹೊಂದಾಣಿಕೆಯಾದರೆ ಮಾತ್ರ ದೇಶದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸರ್ಕಾರ ಅದರದ್ದೇ ಆದ ಕ್ರಮಗಳನ್ನು ಕೈಗೊಳ್ಳುತ್ತದೆ. ಅದರೆ, ಅದು ಸಾಲದು. ಈ ಪರಿಯವರ್ತನೆಗಳು ಯಾಕಾಗುತ್ತಿದೆ? ಸರ್ಕಾರದ ಬಗ್ಗೆ ಭಯವಿಲ್ಲ ಎಂದೆನಿಸುತ್ತಿದೆ. ಭಯ ತರಿಸುವ ಘಟನೆಗಳು ನಡೆಯುತ್ತಿವೆ. ಮತ್ತೆ ನಡೆಯದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಶ್ರೀಗಳು ಹೇಳಿದರು.

ಇತ್ತೀಚಿಗೆ ಹನುಮ ಜಯಂತಿ ಹಾಗೂ ರಾಮನ ಉತ್ಸವಗಳ ಮೇಲೆ ಕಲ್ಲುತೂರಾಟದಂತಹ ಪ್ರತಿರೋಧ ನಡೆಯುವುದು ನೋಡಿದರೆ ತುಂಬಾ ನೋವಾಗುತ್ತದೆ. ಭಾರತದಂತ ರಾಷ್ಟ್ರ, ರಾಮ ಹಾಗೂ ಹನುಮ ಹುಟ್ಟಿದ ನಾಡಿನಲ್ಲಿಯೇ ಹೀಗಾಗುತ್ತಿದೆ. ಬಹುಸಂಖ್ಯಾತರಾಗಿರುವ ಹಿಂದೂಗಳ ಉತ್ಸವದ ಮೇಲೆ ಆಘಾತಗಳು ಸಖ್ಯವಲ್ಲ. ಇಂತಹ ಘಟನೆಗಳನ್ನು ಮುಂದಿಟ್ಟುಕೊಂಡು ಸೌಹಾರ್ದತೆಯ ಬಗ್ಗೆ ಮಾತಾನಾಡುವುದು ಅರ್ಥಶೂನ್ಯ. ಮುಂದಿನ ದಿನಗಳಲ್ಲಿ ಇಂತಹ ಪ್ರತಿರೋಧಗಳು ಬಾರದೇ ಇರಲಿ. ಎಲ್ಲರೂ ಸಹಭಾಳ್ವೆ ನಡೆಸುವಂತಹ ಮೂಲಭೂತ ವ್ಯಕ್ತಿಗತ ಬದಲಾವಣೆ ಅಗಲಿ ಎಂದು ಆಶಿಸಿದರು.

ಅಯೋಧ್ಯೆಯಲ್ಲಿ ರಾಮಮಂದಿರ ಟ್ರಸ್ಟ್ ನ ಸಭೆ ನಡೆಯುತ್ತಿದೆ. ನಾಳೆ ನಾವು ಅಯೋಧ್ಯೆಗೆ ಹೋಗುತ್ತಿದ್ದೇವೆ. ಬೆಂಗಳೂರಿಗೆ ಹೋಗುವ ಮಾರ್ಗಮಧ್ಯೆ ಈಶ್ವರಪ್ಪರ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ್ದೇನೆ. ಈಶ್ವರಪ್ಪರ ಮೇಲೆ ಗುರುತರವಾದ ಆರೋಪ ಬಂದಿದೆ. ಆಗ್ನಿಪರೀಕ್ಷೆಯಲ್ಲಿ ಅವರು ವಿಜಯಿಯಾಗಿ ಹೊರಬರಲಿ ಎಂದು ಆಶಿಸುತ್ತೇನೆ. ದೇವರು, ರಾಮದೇವರು, ದೇಶ ಸೇವೆಯನ್ನು ಅವರು ವಿಶೇಷವಾಗಿ ಮಾಡುತ್ತಾ ಬಂದಿದ್ದಾರೆ‌. ಅವರ ಮೇಲೆ ಶ್ರೀರಾಮ ದೇವರ ಶ್ರೀರಕ್ಷೆ ಸದಾ ಇರಲಿ ಎಂದು ಪೇಜಾವರ ಶ್ರೀಗಳು ಹೇಳಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

23 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

23 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

24 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago