ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಟಿ ಆರ್ ಕೃಷ್ಣಪ್ಪರವರಿಂದ ಅರೆ ಬೆತ್ತಲೆ ಪ್ರತಿಭಟನೆ :

ರಿಪ್ಪನ್ ಪೇಟೆ : ಲಾಭದಲ್ಲಿರುವ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಕ್ಕೆ 
ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರವರು ಇಂದು
ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ
ವಿರುದ್ಧ ಘೋಷಣೆಗಳನ್ನು ಕೂಗಿದರು.

ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿರುವುದೇ ರೈತರು ಮತ್ತು ಬಡ ವರ್ಗಕ್ಕೆ ನೆರವಾಗುವುದಕ್ಕಾಗಿ,
ಇದೀಗ ಖಾಸಗೀಕರಣ ಮಾಡಿದರೆ ಬಡ ವರ್ಗ ಸಂಕಷ್ಟಕ್ಕೆ ಸಿಗಲಿದೆ. ಆದ್ದರಿಂದ ಯಾವುದೇ ರಾಷ್ಟ್ರೀಕೃತ
ಬ್ಯಾಂಕನ್ನು ಖಾಸಗೀಕರಣ ಮಾಡುವುದಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಖಾಸಗಿ ಒಡೆತನದಲ್ಲಿದ್ದ ಬ್ಯಾಂಕಗಳಿಂದ ಸಾಮಾನ್ಯ ಜನಕ್ಕೆ
ನೆರವಾಗುತ್ತಿರಲಿಲ್ಲ. ಇದೇ ಕಾರಣದಿಂದ ಬಡವರ್ಗದ ಜನರಿಗೆ ನೆರವಾಗುವ ಉದ್ದೇಶದಿಂದ ಬ್ಯಾಂಕುಗಳ
ರಾಷ್ಟ್ರೀಕರಣ ಮಾಡಲಾಗಿತ್ತು. ಇದೀಗ ಮತ್ತೆ ಖಾಸಗಿಯವರಿಗೆ ನೀಡಿದರೆ ದೇಶದ ಆರ್ಥಿಕ ವ್ಯವಸ್ಥೆಯ
ಮೇಲೆ ದೊಡ್ಡ ಮಟ್ಟದ ತೊಂದರೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಬ್ಯಾಂಕುಗಳನ್ನು ಖಾಸಗೀಕರಣ ಮಾಡಿದಲ್ಲಿ ರೈತರಿಗೆ, ಸಣ್ಣ ಉದ್ದಿಮೆದಾರರಿಗೆ ಸಾಲ(Loan)
ಸೌಲಭ್ಯಗಳು ಲಭ್ಯವಾಗುವುದಿಲ್ಲ. ಇದರಿಂದ ಪ್ರಸ್ತುತ ಸಂಕಷ್ಟದಲ್ಲಿ ಸಿಲುಕಿರುವ ರೈತ ವರ್ಗಕ್ಕೆ
ತೀವ್ರ ತೊಂದರೆಯಾಗಲಿದೆ. ಬ್ಯಾಂಕುಗಳು ದೇಶದ ಆರ್ಥಿಕತೆಯ ನರನಾಡಿಗಳಂತಿವೆ. ಅಂತಹ
ಸಂಸ್ಥೆಗಳನ್ನು ಖಾಸಗಿಯವರ ಕೈಗೆ ಕೊಟ್ಟಲ್ಲಿ ದೇಶದ ಆರ್ಥಿಕತೆಯ ಮೇಲೆ ಪ್ರಭಾವ ಬೀರಲಿದೆ.
ಆದ್ದರಿಂದ ಯಾವುದೇ ಕಾರಣಕ್ಕೂ ಬ್ಯಾಂಕುಗಳ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಇನ್ನೂ ಹದಿನೈದು
ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ಶಿವಮೊಗ್ಗದ ಮುಖ್ಯ ಬ್ರಾಂಚ್
ಬಳಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇

Leave a Reply

Your email address will not be published. Required fields are marked *