ರಿಪ್ಪನ್ ಪೇಟೆ : ಪ್ರೀತಿ, ಪ್ರೇಮ,ಮತ್ತು ಭಾವೈಕ್ಯದ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬಹುದು. ಜಗತ್ತಿನಲ್ಲಿರುವ ಪ್ರತಿಯೊಬ್ಬರಿಗೂ ಪ್ರೀತಿ-ಪ್ರೇಮ ಮತ್ತು ಶಾಂತಿಯನ್ನು ಹಂಚೋಣ ಆ ಮೂಲಕ ಭಾವೈಕ್ಯತೆ ಮತ್ತು ಸಾಮರಸ್ಯದ ಸಮಾಜವನ್ನು ನಿರ್ಮಾಣ ಮಾಡಬಹುದೆಂದು ರೆ. ಫಾ.ಬಿನೋಯ್ ಹೇಳಿದರು.
ಪಟ್ಟಣದ ಗುಡ್ ಶಫರ್ಡ್ ಚರ್ಚಿನಲ್ಲಿ ಶುಕ್ರವಾರ ಗುಡ್ ಫ್ರೈಡೆ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಗತ್ತಿಗೆ ಶಾಂತಿ ಮಂತ್ರವನ್ನು ಪಡಿಸಿದ ಯೇಸು ಕ್ರಿಸ್ತರು ಪ್ರೀತಿ ಪ್ರೇಮ ಭಾವ್ಯಕ್ಯತೆ ಮತ್ತು ಸಾಮರಸ್ಯದಿಂದ ಬದುಕಿದಾಗ ಮಾತ್ರ ಸಮಾಜದಲ್ಲಿ ನೆಮ್ಮದಿಯನ್ನು ಕಾಣಬಹುದು. ಪ್ರತಿಯೊಬ್ಬರು ದ್ವೇಷ,ಅಸೂಯೆ, ಮುಂತಾದ ಕೆಟ್ಟ ಗುಣಗಳನ್ನು ಬಿಟ್ಟು . ಜಗತ್ತಿನ ಜೀವ ಸಂಕುಲದಲ್ಲಿ ನಾವುಗಳೆಲ್ಲರೂ ಒಂದೇ ಎಂಬ ಭಾವನೆಯನ್ನು ಅಳವಡಿಸಿಕೊಂಡು. ಜಾತಿ ಮತ ಪಂಥಗಳ ಬೇಧವನ್ನು ಮರೆತು ಸದ್ಭಾವನೆಯಿಂದ ಎಲ್ಲರಲು ಬೆರೆತು ಸೇವೆಯನ್ನು ಮಾಡಿದಾಗ ಮಾತ್ರ ಯೇಸುಕ್ರಿಸ್ತರು ಜಗತ್ತಿಗೆ ಸಾರಿದ ಶುಭಸಂದೇಶಕ್ಕೆ ಅರ್ಥ ಸಿಕ್ಕಿದಂತಾಗುತ್ತದೆ.ಅನುಕಂಪ, ದಯೆ, ಕರುಣೆ, ಮಾನವೀಯತೆ, ಇವುಗಳೆಲ್ಲವೂ ಪ್ರತಿಯೊಬ್ಬರ ಮುಖ್ಯಗುಣ ಗಳಾಗಿರಬೇಕು ಎಂದರು.
ಗುಡ್ ಶಫರ್ಡ್ ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನಗಳು ಮುಗಿದ ನಂತರ ಯೇಸು ಸ್ವಾಮಿಯ ಮೂರ್ತಿಯನ್ನು ಶಿಲುಬೆಯ ಹಾದಿಯ ಮೂಲಕ ಮಳವಳ್ಳಿ ಗ್ರಾಮದವರೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.
ಗುಡ್ ಫ್ರೈಡೆ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್