Headlines

ಶಾಲೆಗಳಲ್ಲಿನ ಬಿಸಿಯೂಟ ಕಾರ್ಯಕ್ರಮಕ್ಕೆ ಡಾ| ಶಿವಕುಮಾರ ಸ್ವಾಮೀಜಿ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ತುಮಕೂರಿನ  ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ನಡೆದ ಶಿವಕುಮಾರ ಸ್ವಾಮೀಜಿ ಅವರ   115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.

ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ. ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಮಠಕ್ಕೆ ಆಗಮಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version