ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ :ಶ್ರೀ ರೇಣುಕಾನಂದ ಸ್ವಾಮೀಜಿ

ರಿಪ್ಪನ್ ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು  ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.
ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು. ಶ್ರೀ ನಾರಾಯಣ ಗುರುಗಳು ಶಿಕ್ಷಣ ಕಾಂತಿಯ ಮೂಲಕ  ಸಮಾಜದಲ್ಲಿನ ಪ್ರತಿಯೊಬ್ಬರು ಒಳ್ಳೆಯ ಶಿಕ್ಷಣವನ್ನು ಪಡೆಯಬೇಕು ಎನ್ನುವ ಪರಿಕಲ್ಪನೆಯನ್ನು ಹೊಂದಿ ಅದನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾದರು. ಶಿಕ್ಷಣವು ಮಾನವನ ಬದುಕಿನಲ್ಲಿ ಮಹತ್ವವಾದ ಪಾತ್ರವನ್ನು ವಹಿಸುತ್ತದೆ ಹಾಗೆಯೇ ಸಮಾಜದ ಅಭಿವೃದ್ಧಿಯಲ್ಲಿ ಸಹ ಅತ್ಯುನ್ನತವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು ತಮ್ಮ ಮಕ್ಕಳಿಗೆ ಸರಿಯಾದ ಸಮಯದಲ್ಲಿ ಸರಿಯಾದ ಶಿಕ್ಷಣವನ್ನು ಕೊಡಿಸಿ. ಮಕ್ಕಳಿಗೆ ಶಿಕ್ಷಣದ ಬಗ್ಗೆ ಅಭಿರುಚಿಯನ್ನು ಬೆಳಸಬೇಕು . ಹಾಗೆಯೇ ಉತ್ತಮ ಸಂಸ್ಕಾರವನ್ನು ಕಲಿಸಿದರೆ  ಮಾತ್ರ ಮಕ್ಕಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ಉತ್ತಮ ಅಂಕಗಳನ್ನು ಪಡೆದುಕೊಂಡು ಉನ್ನತ ಉದ್ಯೋಗವನ್ನು ಅಲಂಕರಿಸಿ ಸಮಾಜದ ಮುಖ್ಯವಾಹಿನಿಗೆ ಬರುತ್ತಾರೆ ಎಂದರು.

 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರಶಿಕ್ಷಣಾಧಿಕಾರಿ ವೀರಭದ್ರಪ್ಪ ಮಾತನಾಡಿ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಸರಕಾರಿ ಶಾಲೆಗಳಲ್ಲಿ ಪಾಠಪ್ರವಚನಗಳನ್ನು ಮಾಡುವ ಬೋಧಕರು ಅತ್ಯುತ್ತಮವಾದ ಶಿಕ್ಷಣವನ್ನು ಪಡೆದಿದ್ದು ಹಾಗೆಯೇ ಸರಕಾರವೂ ಸಹ ನುರಿತ ಶಿಕ್ಷಣ ತಜ್ಞರಿಂದ ಉತ್ತಮ ತರಬೇತಿಗಳನ್ನು ಸಹ ನೀಡುತ್ತಿದ್ದು ಯಾವುದೇ ಖಾಸಗಿ ಶಿಕ್ಷಣ ಸಮಿತಿಗಳು ನೀಡದಂತಹ ಶಿಕ್ಷಣವನ್ನು ಈಗ ಸರ್ಕಾರಿ ಶಾಲೆಗಳು ನೀಡುತ್ತೇವೆ. ಸರಕಾರಿ ಶಾಲೆಗಳಲ್ಲೇ ಪಾಠಪ್ರವಚನಗಳ ಜೊತೆ ಹಾಲು.ಮಧ್ಯಾಹ್ನದ ಬಿಸಿ ಊಟ. ಸಮವಸ್ತ್ರ.ಪಾದರಕ್ಷೆ,ಹಾಗೂ ಪಠ್ಯ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಿವೆ ಇದರ ಪ್ರಯೋಜನವನ್ನು ಗ್ರಾಮೀಣ ಪ್ರದೇಶದ ಜನರು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಜೇಂದ್ರ  ಹಾರಂಬಳ್ಳಿ, ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪರೀಕ್ಷೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ. ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಬಿ ಬೋಜಪ್ಪ.ಹೆದ್ದಾರಿಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಕವಿತಾ ಭೀಮರಾಜ್ .ಮಳವಳ್ಳಿ ಚಂದ್ರಶೇಖರ,  ಗಂಗಾಧರ್ ಸಿದ್ದೇಶ್.ರವಿ.ಮಧುರ ಇನ್ನಿ ತರರಿದ್ದರು.ಮುಖ್ಯಶಿಕ್ಷಕ ಮೋಹನ್ ಕುಮಾರ್,ನಿರೂಪಿಸಿದರು, ಪ್ರೇಮ ಬಾಯಿ ಶಿಕ್ಷಕಿ, ಸ್ವಾಗತಿಸಿದರು,ಗಣಪತಿ ವಂದಿಸಿದರು,
ವಾರ್ಷಿಕೋತ್ಸವ ಸಂಭ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳಿಂದ  ವಿವಿಧ ಮನೋರಂಜನೆಯನ್ನು ಏರ್ಪಡಿಸಲಾಗಿತ್ತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

8 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

10 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

11 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

11 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago