ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಯಲ್ಲಮ್ಮ ಗುಡ್ಡದಲ್ಲಿ ಮಹಿಳೆಯೊಬ್ಬರಿಗೆ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಯಲ್ಲಮ್ಮ ಗುಡ್ಡದ ನಿವಾಸಿ ಸೀಮಾ ಬಾನು ಅವರಿಗೆ ತಲೆನೋವು, ಜ್ವರ, ಶೀತ, ನೆಗಡಿ, ಕೆಮ್ಮು, ಕಣ್ಣು ನೋವು ಕಾಣಿಸಿಕೊಂಡಿತ್ತು.
ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಪರೀಕ್ಷೆ ಮಾಡಿದಾಗ ಕೆಎಫ್‌ಡಿ ಸೋಂಕು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರ್ಗಲ್ ಆಸ್ಪತ್ರೆಗೆ ಸೀಮಾ ಬಾನು ಚಿಕಿತ್ಸೆಗೆ ಬಂದಾಗ ಶುಶ್ರೂಷಕಿಯರು ಜಿಲ್ಲಾ ವೈರಾಣು ಪರೀಕ್ಷಾ ಕೇಂದ್ರಕ್ಕೆ ಅವರ ರಕ್ತದ ಮಾದರಿ ಕಳುಹಿಸಿದ್ದರು. ಅವರಿಗೆ ಕೆಎಫ್‌ಡಿ ಸೋಂಕು ಈಗ ಧೃಢಪಟ್ಟಿದೆ.
ಸೀಮಾ ಬಾನು ಕೆಎಫ್‌ಡಿ ರೋಗ ನಿರೋಧಕ ಲಸಿಕೆ ಪಡೆದಿರಲಿಲ್ಲ. ಸೋಂಕು ದೃಢಪಟ್ಟಿರುವ ಯಲ್ಲಮ್ಮ ಗುಡ್ಡದ ಸುತ್ತಲಿನ ಪ್ರದೇಶಗಳಲ್ಲಿ ಈಗಾಗಲೇ 60ಕ್ಕೂ ಹೆಚ್ಚು ಜನರಿಗೆ ರೋಗ ನಿರೋಧಕ ಲಸಿಕೆ ನೀಡಲಾಗಿದೆ. ಕೊರೊನಾ ಲಸಿಕೆ ಎರಡೂ ಡೋಸ್ ಪಡೆದವರನ್ನು ಗುರುತಿಸಿ ಕೆಎಫ್‌ಡಿ ರೋಗ ನಿರೋಧಕ ಲಸಿಕೆ ನೀಡಲಾಗುತ್ತಿದೆ. ಆ ಭಾಗದ ಪ್ರತಿ ಮನೆಗೂ ಡಿಎಂಪಿ ತೈಲ ಪೂರೈಸಲಾಗಿದೆ.
ಕಾಡಿನ ಅಂಚಿನ ಪ್ರದೇಶದಲ್ಲಿ ವಾಸ ಮಾಡುತ್ತಿರುವವರು ಕಡ್ಡಾಯವಾಗಿ ದ್ರಾವಣವನ್ನು ಲೇಪನ ಮಾಡಿಕೊಳ್ಳಬೇಕು. ರಕ್ತದೊತ್ತಡ ಮತ್ತು ಮಧುಮೇಹ ಉಳ್ಳವರಲ್ಲಿ ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಅಥವಾ ಆರೋಗ್ಯ ಇಲಾಖೆಯ ಶುಶ್ರೂಷಕಿಯರನ್ನು ಸಂಪರ್ಕಿಸಬೇಕು ಎಂದು ಕೆಎಫ್‌ಡಿ ತಜ್ಞ ಡಾ. ರವೀಂದ್ರ ಹೇಳಿದರು.
ಪರಿಹಾರ ಯಾವ ಕಾಲಕ್ಕೋ :
ಶಿವಮೊಗ್ಗ ಜಿಲ್ಲೆಯ ಸಾಗರದ ಶಾಸಕ ಹರತಾಳು ಹಾಲಪ್ಪ ರವರು ವಿಧಾನಸಭೆಯಲ್ಲಿ ಮಂಗನಕಾಯಿಲೆ ಸಂಕಷ್ಟದ ಬಗ್ಗೆ ವಿವರವಾಗಿ ಮಾತನಾಡಿ ಗಮನ ಸೆಳೆದಿದ್ದರು. ಆದರೆ ಇಲ್ಲಿಯವರೆಗೆ ಸಮರ್ಪಕ ಪರಿಹಾರ ಮಾತ್ರ ಸಿಕ್ಕಿಲ್ಲ. ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಕಾಯಿಲೆ ಪ್ರತಿ ವರ್ಷ ತೊಂದರೆ ನೀಡುತ್ತದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್