ಶಿವಮೊಗ್ಗ ಹರ್ಷನ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ನಡೆದಿತ್ತು ವಿಫಲ ಸಂಚು!!!!! : ಎಸ್ಪಿ ಖಡಕ್ ಕಾರ್ಯಾಚರಣೆಯಲ್ಲಿ 13 ಜನರ ಮೇಲೆ FIR

ಹರ್ಷನ ಕೊಲೆಗೆ ಪ್ರತಿಕಾರವಾಗಿ ಮತ್ತೊಂದು ಕೊಲೆಗೆ ಸಂಚು ರೂಪಿಸಲಾಗಿತ್ತಾ ಎಂಬ ಅನುಮಾನಕ್ಕೆ ಈ ಘಟನೆ ಕಾರಣವಾಗಿದೆ.ಹರ್ಷ ಕೊಲೆಯ ಪ್ರತೀಕಾರವಾಗಿ ಮುಸ್ಲಿಂ ಯುವಕನೊಬ್ಬನ ಕೊಲೆಗೆ ಸಂಚನ್ನು ರೂಪಿಸಿದ ಖತರ್ನಾಕ್‌ ಗ್ಯಾಂಗ್ ನ್ನು ನಿಷ್ಕ್ರಿಯಗೊಳಿಸುವಲ್ಲಿ ಪೊಲೀಸ್ ಇಲಾಖೆ ಸಫಲವಾಗಿದೆ.

ಹರ್ಷನ ಕಗ್ಗೊಲೆ ಸಮಯದಲ್ಲಿ ಪತ್ರಕರ್ತರೊಬ್ಬರ ಮೇಲೆ ನಡೆದ ಹಲ್ಲೆ ನಡೆಸಿದ್ದ ಆರೋಪಿ ಜೇಟ್ಲಿಯನ್ನ ಬಂಧಿಸಿದಾಗ ಕೊಲೆಯ ಸಂಚನ್ನು ಬಾಯಿಬಿಟ್ಟಿದ್ದಾನೆ. ಈ ಹಿನ್ನಲೆಯಲ್ಲಿ 13 ಜನರ ವಿರುದ್ಧ ಎಫ್ಐಅರ್ ದಾಖಲಾಗಿದೆ.

ರಾಖಿ, ವಿಶ್ವಾಸ್, ವಾಸನೆ, ಬೆಂಗಳೂರು, ಕಟ್ಟೆ, ಕೋಟಿ, ಕುಲ್ಡ, ಅಪ್ಪು ಸಚಿನ್ ಮೊದಲಾದವರು ಸೇರಿದಂತೆ 13 ಜನರ ಮೇಲೆ ಎಫ್ಐಆರ್ ದಾಖಲಾಗಿದೆ ಇದರಲ್ಲಿ ಬಹುತೇಕರನ್ನು ಬಂಧಿಸಿ ಕರತರಲಾಗಿದೆ.

ಎಸ್ಪಿಯವರ ಖಡಕ್ ಸೂಚನೆ ಮೇರೆಗೆ ಮತ್ತೊಂದು ಕೋಮುಗಲಭೆಗೆ ಕಾರಣವಾಗಬೇಕಿದ್ದ ಘಟನೆಯನ್ನ ತಪ್ಪಿಸಲಾಗಿದೆ.

ಕೋಮುದುಳ್ಳರಿಗೆ ಕಾರಣವಾಗಬೇಕಿದ್ದ ಘಟನೆಯನ್ನ ತಪ್ಪಿಸಿರುವ ಕೀರ್ತಿ ಎಸ್ಪಿ ಡಾ.ಬಿ.ಎಮ್ ಲಕ್ಷ್ಮೀ ಪ್ರಸಾದ್ ಗೆ ಸಲ್ಲುತ್ತದೆ. ರಾತ್ರೋ ರಾತ್ರಿ ಎಕ್ಸಿಕ್ಯೂಟ್ ಆಗಬೇಕಿದ್ದ ಕೊಲೆಯ ಸಂಚನ್ನ ತಡೆಗಟ್ಟಲು ಹಾಗೂ‌ ಪತ್ತೆ ಮಾಡುವಲ್ಲಿ ಎಸ್ಪಿ ಯವರ ಖಡಕ್ ಕಾರ್ಯಾಚರಣೆ ಕಾರಣವಾಗಿದೆ.


ಮಾಹಿತಿ : ಸುದ್ದಿಲೈವ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

22 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

22 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

23 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago