ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ನೇತೃತ್ವದಲ್ಲಿ ಗುಂಡಪ್ಪ ಶೆಡ್ ಬಳಿ ಇರುವ ಸಚಿವ ಈಶ್ವರಪ್ಪ ನಿವಾಸದ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೊಲೆಗಡುಕ ಸಚಿವರನ್ನು ಬಂಧಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಕೊಲೆಗಡುಕ ಸಚಿವರನ್ನು ಬಂಧಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇