ರಿಪ್ಪನ್ ಪೇಟೆ : ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಘಟನೆಗೆ ಸಂಬಂಧಿಸಿದಂತೆ ಸಚಿವರಾದ ಕೆ.ಎಸ್. ಈಶ್ವರಪ್ಪನವರ ಹೆಸರು ಲಂಚಾರೋಪದಲ್ಲಿ ಪ್ರಸ್ತಾಪವಾಗಿದ್ದು, ಉಲ್ಲೇಖಿಸಿದ ವ್ಯಕ್ತಿಯು ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಘಟನೆಗೆ ಸಚಿವರು ಕಾರಣವೆಂದು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಸಚಿವರು ನೈತಿಕ ಹೊಣೆಹೊತ್ತು ಕೂಡಲೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದ ವತಿಯಿಂದ ನಾಡ ಕಛೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಆಮ್ ಅದ್ಮಿ ಪಕ್ಷದ ತಾಲೂಕ್ ಉಪಾಧ್ಯಕ್ಷರಾದ ಹಸನಬ್ಬ ಮಾತನಾಡಿ ಇಷ್ಟೊಂದು ಗಂಭೀರ ಆರೋಪ ಎದುರಿಸುತ್ತಿರುವ ಸಚಿವರನ್ನು ಮುಖ್ಯಮಂತ್ರಿಗಳು ಸಚಿವ ಸಂಪುಟದಿಂದ ವಜಾಗೊಳಿಸಿ, ತನಿಖೆ ಕೈಗೊಳ್ಳಬೇಕು. ರಾಜ್ಯ ಸರ್ಕಾರದ ಭಾಗವಾಗಿರುವ ಸಚಿವರು ಲಂಚಗುಳಿತನದಲ್ಲಿ ಭಾಗಿಯಾಗಿರುವ ಆರೋಪ ಕೆಲವು ತಿಂಗಳುಗಳಿಂದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದು, ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗಮನಕ್ಕೆ ಗುತ್ತಿಗೆದಾರರು ಪತ್ರಮುಖೇನ ತಂದಿದ್ದಾರೆ. ಆದರೆ ಯಾವುದೇ ಕ್ರಮವಹಿಸದೆ, ರಾಜ್ಯ ಸರ್ಕಾರ ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡಿದಂತೆ ವರ್ತಿಸುತ್ತಿದ್ದಾರೆ. ರಾಜ್ಯಪಾಲರು ರಾಜ್ಯ ಸರ್ಕಾರವನ್ನು ಅಮಾನತ್ತುಗೊಳಿಸಿ ತನಿಖೆ ನಡೆಸುವ ಮೂಲಕ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಒತ್ತುನೀಡಬೇಕಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಆಮ್ ಆದ್ಮಿ ಪಕ್ಷದ ಕೆ ಡಿ ಈಶ್ವರಪ್ಪ ,ಹನೀಫ಼್ ,ಆರ್ ಎಸ್ ನಾಗರಾಜ್,ನಾರಾಯಣೋಜಿ ರಾವ್ ,ನಾಸೀರ್ ಹಾಗೂ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್