ಪ್ರತಿಭಟನೆಗೆ ಮಣಿದ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ! ಕಮಿಷನ್ ಆರೋಪಕ್ಕೆ ಬಿಜೆಪಿ ಸರ್ಕಾರದ ಬಿಗ್ ವಿಕೆಟ್ ಡೌನ್!
ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಸಂಜೆ ತಮ್ಮ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾಳೆ ದಿನ ಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನ ನೀಡುತ್ತೇನೆ ಎಂದಿದ್ದಾರೆ.
ಈ ಮೂಲಕ ಗುತ್ತಿಗೆ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೊದಲ ವಿಕೆಟ್ ಪತನವಾದಂತಿದೆ.
ಈ ಮೂಲಕ ಗುತ್ತಿಗೆ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೊದಲ ವಿಕೆಟ್ ಪತನವಾದಂತಿದೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್ನ ಬೆನ್ನಲ್ಲೆ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೆ ಅವರ ರಾಜೀನಾಮೆಗೆ ಕಾಂಗ್ರೆಸ್ ರಾಜ್ಯದೆಲ್ಲೆಡೆ ಹೋರಾಟ ಕೈಗೊಂಡಿತ್ತು.

