ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ : ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಣೆ :

ಪ್ರತಿಭಟನೆಗೆ ಮಣಿದ ಕೆ.ಎಸ್​.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ! ಕಮಿಷನ್ ಆರೋಪಕ್ಕೆ ಬಿಜೆಪಿ ಸರ್ಕಾರದ ಬಿಗ್ ವಿಕೆಟ್​ ಡೌನ್​!
ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದ ಸಚಿವ ಕೆ.ಎಸ್​.ಈಶ್ವರಪ್ಪ ಇವತ್ತು ಸಂಜೆ ತಮ್ಮ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾಳೆ ದಿನ ಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನ ನೀಡುತ್ತೇನೆ ಎಂದಿದ್ದಾರೆ.

ಈ ಮೂಲಕ ಗುತ್ತಿಗೆ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೊದಲ ವಿಕೆಟ್​ ಪತನವಾದಂತಿದೆ.
ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಕೇಸ್​ನ ಬೆನ್ನಲ್ಲೆ ಕೆ.ಎಸ್​.ಈಶ್ವರಪ್ಪನವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೆ ಅವರ ರಾಜೀನಾಮೆಗೆ ಕಾಂಗ್ರೆಸ್ ರಾಜ್ಯದೆಲ್ಲೆಡೆ ಹೋರಾಟ ಕೈಗೊಂಡಿತ್ತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

10 hours ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

10 hours ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

10 hours ago

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

1 day ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

1 day ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

1 day ago