ಶಿವಮೊಗ್ಗ : ಬ್ಲೇಡ್ ನಿಂದ ಕೈಕೊಯ್ದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ನೆಹರೂ ರಸ್ತೆಯ ಖಾಸಗಿ ಲಾಡ್ಜ್ ನಲ್ಲಿ ಈ ಘಟನೆ ನಡೆದಿದೆ.
ಈ ಯುವಕನ ಸಾವಿನ ಆಯ್ಕೆ ಬಹುತೇಕ ಅಚ್ಚರಿ ಮೂಡಿಸಿದೆ. ಕೈಯ್ಯನ ಬ್ಲೇಡ್ ನಿಂದ ಕೊಯ್ದುಕೊಂಡ ಕಾರಣ ಟಾಯ್ಲೆಟ್ ಎಲ್ಲಾ ರಕ್ತಸಿಕ್ತವಾಗಿದೆ. ಸಾಲಬಾಧೆಯೇ ಆತನ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ.
ಮೃತ ವ್ಯಕ್ತಿಯು ಬೆಂಗಳೂರು ನಿವಾಸಿ ನಾಗೇಂದ್ರ ಎಂದು ತಿಳಿದುಬಂದಿದೆ.
ಏ. 28 ರ ಬೆಳಿಗ್ಗೆ 5-30 ಕ್ಕೆ ಲಾಡ್ಜ್ ನಲ್ಲಿ ಚೆಕ್ ಇನ್ ಆದ ನಾಗೇಂದ್ರ ಅಂದು ಸಂಜೆಯೇ ಬ್ಲೇಡ್ ನಿಂದ ಕೈ ಕೊಯ್ದುಕೊಂಡಿದ್ದಾನೆ. ಅಂದು ರಾತ್ರಿ ಯಾರಿಗೂ ಏನು ಈ ವಿಷಯ ತಿಳಿದಿಲ್ಲ. ಆದರೆ ಏ.28 ರ ಮಧ್ಯಾಹ್ನ ಹೊರಗಡೆಯಿಂದ ಊಟ ತಂದು ಮಾಡಿದ್ದಾನೆ.
ಇಂದು ಬೆಳಿಗ್ಗಿನ ಜಾವ ಲಾಡ್ಜ್ ನವರು ಎಲ್ಲರನ್ನೂ ಬಿಸಿನೀರಿಗಾಗಿ ಎಬ್ಬಿಸಿದ್ದಾರೆ. ಆದರೆ ನಾಗೇಂದ್ರ ಎದ್ದಿಲ್ಲ. ನಂತರ ನಿಧಾನವಾಗಿ ಈ ರೂಮಿನಿಂದ ಕೆಟ್ಟ ವಾಸನೆ ಬರಲು ಆರಂಭವಾಗಿದೆ. ಆತನ ಆತ್ಮಹತ್ಯೆಯ ಕುರಿತಂತೆ ಲಾಡ್ಜ್ ನವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಅಸ್ವಾಭಾವಿಕ ಮರಣ ಪ್ರಕರಣವನ್ನ ದಾಖಲಿಸಲಾಗಿದೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಗೆ ಕಳುಹಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್