Headlines

ಸಿಡಿಲು ಬಡಿದು ಯುವ ರೈತ ಸಾವು

ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದ ಯುವ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ಇಂಡುವಳ್ಳಿ ಗ್ರಾಮದ ಗೌತಮ್ ನಾಗರಾಜ (23) ಮೃತ ದುರ್ಧೈವಿ.

ಗ್ರಾಮದ ಸರ್ವೆ ನಂ 121/2 ರಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತಾಗಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಗೌತಮ್ ಮೃತ ಪಟ್ಟಿದ್ದಾರೆ.

ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

About The Author

Leave a Reply

Your email address will not be published. Required fields are marked *

Exit mobile version