w
Headlines
Home » ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :

ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :

ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಮನೆಯೊಂದರ ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಶಿವಮೊಗ್ಗದ ಉರಗ ರಕ್ಷಕ‌ ಸ್ನೇಕ್ ಕಿರಣ್ ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಮಂಡಗದ್ದೆ ಹೋಬಳಿಯ ಕೆರೆಕೊಪ್ಪದ ನಿವಾಸಿ ಆನಂದ ನಾಯ್ಕರ್ ಅವರ ಸ್ನಾನದ ಕೋಣೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಸೇರಿಕೊಂಡಿತ್ತು. ಹಾವನ್ನು ಕಂಡು ಭಯಭೀತರಾದ ಮನೆ ಮಾಲೀಕ, ಕೂಡಲೇ ಉರಗ ರಕ್ಷಕ‌ ಸ್ನೇಕ್ ಕಿರಣ್ ಅವರಿಗೆ ಫೋನ್ ಮಾಡಿ ವಿಚಾರ ತಿಳಿಸಿದ್ದಾರೆ. ವಿಷಯ ತಿಳಿದು ತಕ್ಷಣ ಗ್ರಾಮಕ್ಕೆ ತೆರಳಿದ ಸ್ನೇಕ್ ಕಿರಣ್ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ, ಕಾಳಿಂಗವನ್ನು ರಕ್ಷಿಸಿದರು.

ಈ ವೇಳೆ ಕಾಳಿಂಗ ಸರ್ಪ ಕಿರಣ್​ ಮೇಲೆ ದಾಳಿ ಮಾಡಲು ಯತ್ನಿಸಿತು. ನಂತರ ಅದನ್ನು ಸುರಕ್ಷಿತವಾಗಿ ಕಿರಣ್ ಸೆರೆ ಹಿಡಿದರು. ಬಳಿಕ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಹಾವನ್ನು ಕಾಡಿಗೆ ಬಿಡಲಾಯಿತು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.