ಸ್ನೇಹಿತರಿಬ್ಬರು KGF 2 ಚಲನಚಿತ್ರ ನೋಡಿಕೊಂಡು ಹಿಂದಿರುಗುತಿದ್ದಾಗ KTM ಬೈಕ್ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

KGF 2 ಚಲನಚಿತ್ರವನ್ನು ಶಿವಮೊಗ್ಗದಲ್ಲಿ ನೋಡಿಕೊಂಡು ಹಿಂದಿರುಗುತ್ತಿದ್ದ ಬೈಕ್ ಭದ್ರಾವತಿ ಬಳಿ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ನಿನ್ನೆ ಸಂಜೆ kgf2 ಚಿತ್ರ ನೋಡಲು ಎನ್ ಆರ್ ಪುರದಿಂದ ಶಿವಮೊಗ್ಗಕ್ಕೆ ಬಂದಿದ್ದ ಇಬ್ಬರು ಸ್ನೇಹಿತರು ಹಿಂದಿರುಗುವಾಗ ಈ ದುರ್ಘಟನೆ ನಡೆದಿದೆ.


ಎನ್ ಆರ್ ಪುರ ನಿವಾಸಿ ಶಿವಕುಮಾರ್(28) ಮೃತ ದುರ್ದೈವಿಯಾಗಿದ್ದು ಆತನ ಸ್ನೇಹಿತ ಎನ್ ಆರ್ ಪುರ ವಾಸಿ ಮನೋಜ್ ಎಂಬುವವನಿಗೂ ಸಹ ಗಂಭೀರ ಗಾಯಗಳಾಗಿದ್ದು ಎನ್ ಆರ್ ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಸಂಜೆ ಕೆ ಎ 01 ಹೆಚ್ 4896 ನಂಬರಿನ ಕೆ ಟಿ ಎಂ ಡೂಕ್ ಬೈಕಿನಲ್ಲಿ ಶಿವಕುಮಾರ ಎಂಬುವವನು ಹಿಂಬದಿಯಲ್ಲಿ ಸ್ನೇಹಿತ ಮನೋಜಕುಮಾರ ರವರನ್ನು ಕೂರಿಸಿಕೊಂಡು ಎನ್ ಆರ್ ಪುರದಿಂದ ಶಿವಮೊಗಕ್ಕೆ KGF2 ಪಿಲ್ಮಂನ್ನು ನೋಡಲು ಹೋಗಿ ಚಿತ್ರ ನೋಡಿಕೊಂಡು ವಾಪಾಸ್ ಶಿವಮೊಗದಿಂದ ಎನ್ ಆರ್ ಪುರಕ್ಕೆ ಹೋಗುವಾಗ ಭದ್ರಾವತಿ-ಉಂಬಳೆಬೈಲು ರಾಜ್ಯ ಹೆದ್ದಾರಿ ಟಾರ್ ರಸ್ತೆಯಲ್ಲಿ ಭದ್ರಾವತಿ ತಾಲೂಕ್ ಗೊಂಧಿ ಸರ್ಕಲ್ ದಾಟಿದ ನಂತರ ಹೆಚ್ ಕೆ ಜಂಕ್ಷನ ಕಡೆಗೆ ಹೋಗುವ ರಸ್ತೆಯ ಇಳಿಜಾರಿನಲ್ಲಿ ಇಂದು ಬೆಳಗಿನ ಜಾವ 01.00 ಗಂಟೆಗೆ ಬೈಕನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗುವಾಗ ಬೈಕ್ ಶಿವಕುಮಾರನ ನಿಯಂತ್ರಣಕ್ಕೆ ಸಿಗದೆ ರಸ್ತೆಯ ಎಡಬದಿಯ ಹಳ್ಳಕ್ಕೆ ಬೈಕ್ ಸಮೇತ ಬಿದ್ದು, ಇದರಿಂದ ಶಿವಕುಮಾರ ತಲೆಗೆ ಭಾರಿ ರಕ್ತ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕಿನಲಿ ಹಿಂಬದಿ ಕುಳಿತ್ತಿದ್ದ ಮನೋಜಕುಮಾರನ ಎಡಭಾಗದ ತೊಡೆಗೆ ಗಂಭೀರ ಗಾಯವಾಗಿದೆ.ಹೆಲ್ಮೆಟ್ ಧರಿಸಿದಿದ್ದಲ್ಲಿ ಅಪಘಾತ ಇಷ್ಟೊಂದು ಗಂಭೀರ ರೀತಿಯಲ್ಲಿ ನಡೆಯುತ್ತಿರಲಿಲ್ಲ.


ಶಿವಕುಮಾರನ ಮೃತ ದೇಹ ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿದ್ದು, ಮನೋಜಕುಮಾರನಿಗೆ ಎನ್ ಪುರಕ್ಕೆ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ.

ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

7 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

9 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

10 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

10 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

11 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago