“ಸ್ವಧರ್ಮದಲ್ಲಿ ನಿಷ್ಠೆ, ಪರ ಧರ್ಮದಲ್ಲಿ ಸಹಿಷ್ಣುತಾ “: ಭಾವವನ್ನು ಹೊಂದಿರುವ ದೇಶ ನಮ್ಮದು : ಮಳಲಿ ಶ್ರೀ

ರಿಪ್ಪನ್ ಪೇಟೆ : ನಮ್ಮ ದೇಶವು ಅನೇಕ ಧರ್ಮಗಳ ಮಹಾಸಾಗರ ವಾಗಿದ್ದು ಅನೇಕತೆಯಲ್ಲಿ ಏಕತೆಯನ್ನು ಹೊಂದಿ ಸ್ವಧರ್ಮದಲ್ಲಿ ನಿಷ್ಠೆ ಪರಧರ್ಮ ದಲ್ಲಿ ಸಹಿಷ್ಣುತಾ ಭಾವವನ್ನು ಹೊಂದಿರುವ ದೇಶವಾಗಿದೆ ಎಂದು ಮಳಲಿ ಮಠದ  ಶ್ರೀ ಡಾ.  ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಇಂದು ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಹೊಸವರ್ಷದ ಧ್ವಜಾರೋಹಣದ  ಯುಗಾದಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ  ಸ್ವಾಮೀಜಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ವಿಶ್ವದ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಭಾರತವು ಸಹ ಮುಂಚೂಣಿಯಲ್ಲಿದ್ದು ಇಲ್ಲಿನ ಜನತೆ  ಸ್ವಧರ್ಮದಲ್ಲಿ ನಿಷ್ಠೆ ಪರಧರ್ಮ ದಲ್ಲಿ ಸಹಿಷ್ಣುತಾಭಾವವನ್ನು ಹೊಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಯುಗಾದಿ ಬಂದರೂ ಜನರಲ್ಲಿ ಉತ್ಸಾಹ ಇರಲಿಲ್ಲ ಕೊರೊನಾ ಎಲ್ಲರನ್ನೂ ಕಾಡಿತ್ತು. ನೋವಿನಿಂದ ಮನೆಯಲ್ಲಿ ಉಳಿಯಬೇಕಾಯಿತು. ಯುಗಾದಿ ಬಂದಿತು ಹೋಯಿತು ಎಂದು ಜನ ನಿಟ್ಟುಸಿರು ಬಿಡುವಂತಾಗಿತ್ತು. ಯುಗಾದಿ ಮತ್ತೆ ಬಂದಿದೆ. ಎಲ್ಲಾ ಕಡೆ ಮರ-ಗಿಡಗಳು ಚಿಗುರು ಕಂಡಿವೆ ಮಾವು-ಬೇವು ಕಂಗೊಳಿಸಿದೆ ಇದರಿಂದ ಜನರಲ್ಲಿ ಈಗ ಹಬ್ಬ ಆಚರಿಸುವ ಹುಮ್ಮಸ್ಸು ಬಂದಿದೆ.
ಪ್ರಕೃತಿ ಎಂದು ನಮಗೆ ಕೈಕೊಟ್ಟಿಲ್ಲ ಈಗ ಯುಗಾದಿಯು ಪ್ರಕೃತಿದತ್ತವಾಗಿ ಬಂದಿದೆ.ನಮ್ಮ ಹಿಂದಿನ ದಿನಗಳನ್ನು ಮರೆತು ಮುಂದಿನ ದಿನಗಳಲ್ಲಿ ಹೊಸ ಬದುಕನ್ನು ರೂಪಿಸಿಕೊಳ್ಳಬೇಕಾಗಿದೆ ಇದಕ್ಕೆ ನಮ್ಮಲ್ಲಿರುವ ಜಾತಿ-ಮತಗಳ   ಹೊಟ್ಟನ್ನು ತೂರಿ ಕಾಳನ್ನು ಆರಿಸಿ ಕೊಳ್ಳೋಣ. ನಮ್ಮ ಹಿರಿಯರು ಈ ವಿಷಯದಲ್ಲಿ ಉತ್ತಮ ಮಾರ್ಗವನ್ನು ತೋರಿಸಿ ಕೊಟ್ಟು ಹೋಗಿದ್ದಾರೆ.  ನಮ್ಮ ಯುವಜನಾಂಗ ವಿಶ್ವಮಟ್ಟದಲ್ಲಿ ಇಡೀ ಮನುಕುಲಕ್ಕೆ ಒಳಿತನ್ನು ಬಯಸುವ ನಾಯಕರಾಗಿ ರೂಪುಗೊಳ್ಳುವ  ಅವಕಾಶ ಲಭಿಸಿದೆ. ಯುಗಾದಿ ನಮ್ಮಲ್ಲಿ ವಿಶಾಲ ಮನೋಭಾವ ಬೆಳೆಸಿ ಮನುಷ್ಯ ಸಹಜ ಸಂಕುಚಿತ ಮನೋಭಾವವನ್ನು ತೊಡೆದುಹಾಕಲು ಸಹಕಾರಿಯಾಗಲಿ , ಯುಗಾದಿ ಹೊಸ ವರ್ಷದ ಶುಭ ಕೃತು ನಾಮ ಸಂವತ್ಸರವು ಸರ್ವರಿಗೂ ಶುಭವನ್ನು ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಹಿಂದೂ ಮಹಾಸಭಾದ ಎಂ. ಬಿ.ಮಂಜುನಾಥ್.ಸುಧೀಂದ್ರ ಪೂಜಾರಿ.ಗ್ರಾಪಂ ಸದಸ್ಯ ನಿರೂಪ್ ಕುಮಾರ್,ವೈ. ಜೆ.ಕೃಷ್ಣ.ಭಾಸ್ಕರ ಶೆಟ್ಟಿ,ರಮೇಶ್ ಫ಼್ಯಾನ್ಸಿ, ಮುರುಳಿ.ಕೆರಳ್ಳಿ ದೇವರಾಜ್.ಆರ್ ರಾಘವೇಂದ್ರ. ವಾಸು ಶೆಟ್ಟಿ. ಕಗ್ಲಿ ಲಿಂಗಪ್ಪ. ಮೈಕ್ ದಾನಪ್ಪ. ಮೆಡಿಕಲ್  ಸತೀಶ್. ನಾಗಭೂಷಣ್. ಎನ್.ವರ್ತೆಶ್
ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

24 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago