ಹಲಾಲ್ ಅಥವಾ ಜಟ್ಕಾ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಭಾನುವಾರ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಎಂಆರ್‌ಎಫ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಹಲಾಲ್ ಹಾಗೂ ಜಟ್ಕಾ ವಿವಾದ ಸೃಷ್ಟಿಸಿರುವುದು ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು.
ಯಾರು ಯಾವ ಪದ್ಧತಿಯನ್ನು ಅನುಸರಿಸುತ್ತಿದ್ದಾರೋ ಅದನ್ನೇ ಮುಂದುವಸಿಕೊಂಡು ಹೋಗಲಿ’ ಎಂದು ಹೇಳಿದರು.
‘ಹಲಾಲ್ ಹಾಗೂ ಜಟ್ಕಾ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಚುನಾವಣೆಯಲ್ಲಿ ತೊಡೆ ತಟ್ಟಿ, ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗೋಣ’ ಎಂದು ಈಶ್ವರಪ್ಪ ಸವಾಲು ಹಾಕಿದರು.
ಉಡುಪಿಯಲ್ಲಿ 6 ವಿದ್ಯಾರ್ಥಿನಿಯರು ಹಿಜಾಬ್ ಗೊಂದಲ ಹುಟ್ಟುಹಾಕಿದಾಗಲೇ ಸಮವಸ್ತ್ರ ಮಾತ್ರ ಧರಿಸಿ ಕಾಲೇಜಿಗೆ ಹೋಗುವಂತೆ ಬುದ್ಧಿ ಹೇಳಿದ್ದರೆ ಇಡೀ ರಾಜ್ಯ ಹಾಗೂ ದೇಶ ತಣ್ಣಗೆ ಇರುತ್ತಿತ್ತು. ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾದಾಗ ಕಾಂಗ್ರೆಸ್ ನಾಯಕರು ಖಂಡಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಉಡುಪಿಯಲ್ಲಿ 6 ವಿದ್ಯಾರ್ಥಿನಿಯರು ಹಿಜಾಬ್ ಗೊಂದಲ ಹುಟ್ಟುಹಾಕಿದಾಗಲೇ ಸಮವಸ್ತ್ರ ಮಾತ್ರ ಧರಿಸಿ ಕಾಲೇಜಿಗೆ ಹೋಗುವಂತೆ ಬುದ್ಧಿ ಹೇಳಿದ್ದರೆ ಇಡೀ ರಾಜ್ಯ ಹಾಗೂ ದೇಶ ತಣ್ಣಗೆ ಇರುತ್ತಿತ್ತು. ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾದಾಗ ಕಾಂಗ್ರೆಸ್ ನಾಯಕರು ಖಂಡಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ದೇಶದಲ್ಲಿ ನಿರ್ನಾಮವಾಗಿರುವ ಕಾಂಗ್ರೆಸ್ ಪಕ್ಷ ಹಿಜಾಬ್, ರಾಷ್ಟ್ರಧ್ವಜ, ಹಲಾಲ್ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಮುಸ್ಲಿಮರನ್ನು ತೃಪ್ತಿಪಡಿಸುವ ಪ್ರಯತ್ನ ಒಳ್ಳೆಯದಲ್ಲ. ಬಿಜೆಪಿ ಹಿಂದುತ್ವದ ಪರವಾಗಿದ್ದರೂ ಮುಸ್ಲಿಮರ ವಿರೋಧಿಯಲ್ಲ. ರಾಷ್ಟ್ರಭಕ್ತ ಮುಸ್ಲಿಮರಿಗೆ ಗೌರವ ಕೊಡುತ್ತೇವೆ. ಆದರೆ, ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದರು.
ಸಚಿವರ ಅಚ್ಚರಿಯ ಹೇಳಿಕೆಯ ವೀಡಿಯೋ ಇಲ್ಲಿ ವೀಕ್ಷಿಸಿ👇👇👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್