“ಹಳ್ಳಿ ಮಕ್ಕಳ ರಂಗ ಹಬ್ಬ” ಶಿಬಿರಕ್ಕೆ ಆಸಕ್ತ ಮಕ್ಕಳಿಂದ ಅರ್ಜಿ ಆಹ್ವಾನ :

ರಿಪ್ಪನ್‌ಪೇಟೆ: ದಿ || ಎಂ.ಕೆ.ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಮತ್ತು ಮಲೆನಾಡು ಕಲಾ ತಂಡ ರಿಪ್ಪನ್‌ಪೇಟೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 13ರಿಂದ 15ದಿನಗಳ ಕಾಲ ರಿಪ್ಪನ್‌ಪೇಟೆಯ ಸರ್ಕಾರಿ ಮಾದರಿ ಹಿರಿಯ ಬಾಲಕರ ಪಾಠ ಶಾಲೆಯಲ್ಲಿ “ಹಳ್ಳಿ ಮಕ್ಕಳ ರಂಗ ಹಬ್ಬ” ರಂಗ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕಲಾ ತಂಡದ ಸಂಚಾಲಕ ಗಣೇಶ ಮಸರೂರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಿಪ್ಪನ್‌ಪೇಟೆಯ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ರಂಗ ಹಬ್ಬದಲ್ಲಿ 9 ವರ್ಷದಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು. ಈ ಶಿಬಿರದಲ್ಲಿ ನಾಟಕ, ನೃತ್ಯ, ಚಿತ್ರಕಲೆ, ಜಾನಪದಗೀತೆ ಗಾಯನ, ವೇದಿಕೆ ನಿರ್ವಹಣೆ, ಸಾಹಿತ್ಯ ಪರಿಚಯ, ರಂಗಗೀತೆ, ಕರಕುಶಲ ಕಲೆ, ಕಥೆ, ಕವನ, ಯೋಗ, ಗ್ರಾಮೀಣ ಕಲೆ, ಸಾಮಾಜಿಕ ಕಳಕಳಿ ಸೇರಿದಂತೆ ಇನ್ನು ವಿಸ್ಮಯಕಾರಿ ಕಲಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.



ಮಕ್ಕಳ ಕಿರುಚಿತ್ರ ಪ್ರದರ್ಶನ ಮತ್ತು ತರಬೇತಿ ಜೊತೆಗೆ ಶಿಬಿರದ ಕೊನೆಯ ದಿನ ಮಕ್ಕಳಿಂದ ಎರಡು ನಾಟಕ ಪ್ರದರ್ಶನ ಮಾಡಿಸಲಾಗುವುದು. ಈ ಶಿಬಿರಕ್ಕೆ ರಂಗಭೂಮಿಯ ಕಿರುತೆರೆ ನಿನಾಸಂ ಪದವೀಧರರು, ಅನುಭವಿ ನಿರ್ದೇಶಕರುಗಳು ಆಗಮಿಸಿ ಮಕ್ಕಳಿಗೆ ತರಬೇತಿ ನೀಡಲಿದ್ದಾರೆ.

ಈ ಶಿಬಿರದಲ್ಲಿ 30 ಜನರಿಗೆ ಅವಕಾಶ ಇದ್ದು ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಅರ್ಜಿ ಶುಲ್ಕ 10 ರೂ. ಹಾಗೂ ಶಿಬಿರ ಶುಲ್ಕ 1000 ರೂ. ಆಗಿದ್ದು, ಹೆಚ್ಚಿನ ಮಾಹಿತಿಗೆ 9481691337, 9902356019, 988697305, 9480724592 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬೆಳಕೋಡು ಹಾಲಸ್ವಾಮಿಗೌಡ್ರು, ಆರ್.ಡಿ.ಶೀಲಾ, ಎಸ್.ಡಿ.ಎಂ.ಸಿ.ಸದಸ್ಯ ಗಣೇಶನಾಯಕ ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago