ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಹಿನ್ನಲೆ ವೈಯಕ್ತಿಕ ದ್ವೇಷ, ಹಳೆಯ ಗಲಾಟೆ ವಿಚಾರ ಅಲ್ಲ : NIA ದಾಖಲು ಮಾಡಿರುವ ಪ್ರಥಮ ವರದಿಯಲ್ಲಿ ಅಘಾತಕಾರಿ ಅಂಶ!!!!

ಶಿವಮೊಗ್ಗದಲ್ಲಿ ಇತ್ತೀಚೆಗೆ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳವು ತನ್ನ ಪ್ರಾಥಮಿಕ ವರದಿಯಲ್ಲಿ ಹರ್ಷ ಕೊಲೆ ಹಿಂದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ ಅಡಗಿತ್ತು.

ತನ್ಮೂಲಕ ಕೋಮುಗಲಭೆ ಎಬ್ಬಿಸುವ ಉದ್ದೇಶವಿತ್ತು ಎಂಬ ಆತಂಕಕಾರಿ ಅಂಶ ಬಹಿರಂಗಪಡಿಸಿದೆ. NIA ದಾಖಲು ಮಾಡಿರುವ ಎಫ್‌ಐಆರ್‌ನಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದರ ವಿವರ ಟಿವಿ9 ಗೆ ಲಭ್ಯವಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಸಮಾಜಯದಲ್ಲಿ ಭಯ ಹುಟ್ಟಿಸುವ ಉದ್ದೇಶವಿತ್ತು. ಸಮಾಜದ ಸ್ವಾಸ್ಥ್ಯ ಹಾಳು ಮಾಡಿ, ಕೋಮುಗಲಭೆ ಸೃಷ್ಟಿಸುವುದು, ಮಾರಕಾಸ್ತ್ರವನ್ನು ಝಳಪಿಸಿ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶವಿತ್ತು ಎಂಬ ಆಘಾತಕಾರಿ ಅಂಶಗಳು ಎನ್‌ಐಎ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ. NIA ದಾಖಲಿಸಿರುವ ಎಫ್‌ಐಆರ್ ಮತ್ತು ದೂರುದಾರರ ದೂರಿನ ಪ್ರತಿ ಮಾಧ್ಯಮಗಳಿಗೆ ಲಭ್ಯವಾಗಿದೆ. ರಾಷ್ಟ್ರೀಯ ತನಿಖಾ ದಳದ ಎಫ್‌ಐಆರ್ ನಲ್ಲಿ ಈ ಮಹತ್ವದ ಅಂಶಗಳೆಲ್ಲಾ ಅಡಕವಾಗಿವೆ.

ವೈಯಕ್ತಿಕ ದ್ವೇಷ, ಹಳೆಯ ಗಲಾಟೆ ವಿಚಾರ ಅಲ್ಲ -ಸಮಾಜದ ಸ್ವಾಸ್ಥ್ಯ ಹಾಳು ಮಾಡುವುದೇ ಪಾತಕಿಗಳ ಉದ್ದೇಶವಾಗಿತ್ತು:

ಹರ್ಷನ ಕೊಲೆ ಮಾಡುವ ಮೂಲಕ ಆರೋಪಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡಬೇಕು. ಸಾರ್ವಜನಿಕರಿಗೆ ಭಯವನ್ನು ಉಂಟು ಮಾಡುವ ಉದ್ದೇಶ ಹೊಂದಿದ್ದರು. ಶಿವಮೊಗ್ಗದಲ್ಲಿ ಕೋಮು ಗಲಭೆ ಎಬ್ಬಿಸಬೇಕು ಎಂಬ ಉದ್ದೇಶ ಇತ್ತಂತೆ. ಎಲ್ಲ ಹತ್ತು ಆರೋಪಿಗಳು ಕೂಡ ಕೋಮು ಗಲಭೆ ಎಬ್ಬಿಸುವ ಉದ್ದೇಶದಿಂದ ಈ ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮಾರಾಕಾಸ್ತ್ರಗಳ ಮೂಲಕ ಸಾರ್ವಜನಿಕರಿಗೆ ಭಯ ಉಂಟು ಮಾಡುವ ಕೃತ್ಯ ಮಾಡಿದ್ರಂತೆ. ಇದೆಲ್ಲಾ ರಾಷ್ಟ್ರೀಯ ತನಿಖಾ ದಳ ದಾಖಲು ಮಾಡಿರುವ ಎಫ್ ಐ ಆರ್ ನಲ್ಲಿ ಅಡಕವಾಗಿದೆ.

ಇನ್ನೂ ಘಾತಕಾರಿ ಅಂಶವೆಂದರೆ ಇಲ್ಲಿ ಯಾವುದೇ ವೈಯಕ್ತಿಕ ದ್ವೇಷ ಅನ್ನೋದನ್ನಾಗಲಿ, ಹಳೆಯ ಗಲಾಟೆ ವಿಚಾರ ಅನ್ನೋದಾಗಲಿ ಉಲ್ಲೇಖ ಮಾಡಿಲ್ಲ. ಆದರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಬೇಕು ಎಂಬುದು ಪಾತಕಿಗಳ ಉದ್ದೇಶವಾಗಿತ್ತು.

ಹರ್ಷ ಕೊಲೆಯ ಮುಂದಿನ ತನಿಖೆ ಎನ್‌ಐಎ ನಡೆಸಲಿದೆ: ಶಿವಮೊಗ್ಗ ಎಸ್​ಪಿ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣದ ತನಿಖೆ ಈಗ ಎನ್‌ಐಎ ನಡೆಸುತ್ತಿದೆ. ಹರ್ಷ ಕೊಲೆ ಪ್ರಕರಣದ ತನಿಖೆಯ ದಾಖಲೆಗಳ ಹಸ್ತಾಂತರವಾಗಿದೆ. ನ್ಯಾಯಾಲಯದ ಮೂಲಕ ಎನ್​ಐಎಗೆ ದಾಖಲೆ ಹಸ್ತಾಂತರ ಮಾಡಲಾಗಿದೆ. ಹರ್ಷ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಸೆಂಟ್ರಲ್​ ಜೈಲಿನಲ್ಲಿದ್ದಾರೆ. ಹರ್ಷ ಕೊಲೆಯ ಮುಂದಿನ ತನಿಖೆ ಎನ್‌ಐಎ ನಡೆಸಲಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

8 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

10 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

11 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

11 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago