ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು.ನಮ್ಮ ಪಕ್ಷ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಸ್ಥಾನಮಾನ ನೀಡುವ ಪಕ್ಷವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜುಗೊಳ್ಳಬೇಕು ಎಂದು ಹೇಳಿದರು.