ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಂಚರಿಸುತ್ತಿದ್ದ ವಾಹನವನ್ನು ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ರಯತ್ನಿಸಿದಾಗ ಪೊಲೀಸರ ಚಾಕಚಕ್ಯತೆಯಿಂದ ಸಫಲರಾಗಲಿಲ್ಲ.ಸಚಿವರ ವಾಹನ ಹೋದ ನಂತರ ಬಿಜೆಪಿ ಪಕ್ಷಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರತಿಭಟನಾ ಸಭೆಯಲ್ಲಿ ಹೊಸನಗರ ತಾಲ್ಲೂಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಜಿ.ಪಂ.ಮಾಜಿ ಸದಸ್ಯ ಬಂಡಿ ರಾಮಚಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ ಹಾರೋಹಿತ್ತಲು, ಜಿಲ್ಲಾ ಕಾಂಗ್ರೆಸ್ ಮುಖಂಡ ಅಮ್ಮೀರ್‌ಹಂಜಾ, ಹೋಬಳಿ ಘಟಕದ ಕಾಂಗ್ರೆಸ್ ಅಧ್ಯಕ್ಷ ಆಸಿಫ್, ತಾ.ಪಂ.ಮಾಜಿ ಸದಸ್ಯ ಎನ್.ಚಂದ್ರೇಶ್,ಜಿ ಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎಂ.ಎಂ.ಪರಮೇಶ್, ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರೀಫ್, ಅರಸಾಳು ಗ್ರಾ.ಪಂ.ಅಧ್ಯಕ್ಷ ಉಮಾಕರ್, ಗ್ರಾ.ಪಂ.ಸದಸ್ಯ ಪ್ರಕಾಶ್ ಪಾಲೇಕರ್, ಗಣಪತಿ ಗವಟೂರು, ಸಾರಾಭಿ, ಧನಲಕ್ಷ್ಮಿ, ವೇದಾವತಿ, ಮಹೀದ್ದೀನ್, ಮಂಜುನಾಥ ಮಳವಳ್ಳಿ, ಬಿಎಸ್‌ಎನ್‌ಎಲ್ ಶ್ರೀಧರ್, ಮಂಜುನಾಥ, ಉಲ್ಲಾಸ್ ತೆಕ್ಕೋಲ್, ಶೇಷಪ್ಪ, ರಾಜು ಹೆದ್ದಾರಿಪುರ, ಚಂದ್ರಶೇಖರ ಮಳವಳ್ಳಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಂಜಪ್ಪ, ಹಾಲುಗುಡ್ಡೆ ದೇವರಾಜ್ ಗಂಟೆ ಇನ್ನಿತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *