Headlines

ರಿಪ್ಪನ್‌ಪೇಟೆ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪುರವರ ಹೆಸರಿಡಲು ಜೆಡಿಎಸ್ ಆಗ್ರಹ

ರಿಪ್ಪನ್ ಪೇಟೆ: ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ.
ಪಟ್ಟಣದ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು 

ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಮೊದಲ ಬಾರಿ ಕನ್ನಡಕ್ಕೆ ತಂದು ಕೊಟ್ಟ ಇವರು.ವಿಶ್ವಮಾನವ ಸಂದೇಶದ ಮೂಲಕ ರಾಷ್ಟ್ರಕವಿಯಾಗಿ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾದ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲುಕಿನಲ್ಲಿ ಜನಿಸಿದ ಕುವೆಂಪು ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡುವುದು ಸೂಕ್ತ ಎಂದರು. 
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಹಾಗೂ ಎಸ್.ಬಂಗಾರಪ್ಪ ನವರ ಕೊಡುಗೆ ಅಪಾರವಾಗಿದೆ.ಹಾಗೂ ರಾಜ್ಯದ ಮುಖ್ಯಮಂತ್ರಿ ಎಸ್ ಆರ್ ಬೊಮ್ಮಾಯಿ ಅವರು ಸೂಚಿಸಿದ ಯಡಿಯೂರಪ್ಪ ಅವರ ಹೆಸರನ್ನು ನಯವಾಗಿ ತಿರಸ್ಕರಿಸುವ ಮೂಲಕ ಮಾಜಿ ಮುಖ್ಯಮಂತ್ರಿಗಳ ಮೇರು ವ್ಯಕ್ತಿತ್ವದ ಘನತೆಯನ್ನು ಎತ್ತಿ ಹಿಡಿದಿರುವುದು ಶ್ಲಾಘನೀಯ ಎಂದರು.


ಈ ದಿಶೆಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಘನತೆ ಗೌರವವನ್ನೂ  ಬೆಳೆಸಿದ ಕುವೆಂಪುರವರ ಹೆಸರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವುದರ ಮೂಲಕ ಅಗ್ರ ಪಂಕ್ತಿಯ ಸ್ಥಾನ ನೀಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಜಿ ಎಸ್ ವರದರಾಜ್ , ಆರ್ ಎನ್ ಮಂಜುನಾಥ್,ಎನ್ ವರ್ತೇಶ್ ಹಾಜರಿದ್ದರು. 

Leave a Reply

Your email address will not be published. Required fields are marked *