w
Headlines
Home » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡೋದಕ್ಕೆ ಸಚಿವ ಸಂಪುಟದಿಂದ ಒಪ್ಪಿಗೆ ನೀಡಲಾಗಿದೆ. ಈ ಹೆಸರನ್ನು ಇಡುವಂತೆ ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸ್ಸು ಕೂಡ ಮಾಡಲಾಗಿದೆ. ಇದು ಕೇಂದ್ರದಿಂದ ಅನುಮೋದನೆಗೊಂಡು ಬರಲಿದೆ ಎಂದು ಹೇಳಿದರು.
ಜಿಲ್ಲೆಯ ವಿಮಾನ ನಿಲ್ದಾಣವು ಯಡಿಯೂರಪ್ಪ ಅವರ ಶ್ರಮ ಮತ್ತು ಆಸಕ್ತಿಯ ಫಲವಾಗಿದೆ. ಈ ಹಿನ್ನಲೆಯಲ್ಲಿಯೇ ರಾಜ್ಯ ಸರ್ಕಾರ ಅವರ ಹೆಸರನ್ನು ನಿಲ್ದಾಣಕ್ಕೆ ಇಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.