ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನಿಂದ ಭಟ್ಕಳಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ.
ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಯಿತು.
ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಕಾರಣ ಎಲ್ಲರೂ ಪ್ರಥಮ ಚಿಕಿತ್ಸೆ ಪಡೆದು ತಮ್ಮೂರಿಗೆ ವಾಪಸ್ ಆಗಿದ್ದಾರೆ.
ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.