ಹೊಸನಗರ : ತಾಲೂಕು ವೀರಶೈವ-ಲಿಂಗಾಯಿತ ಪರಿಷತ್ ನಿಂದ ಹೊಸನಗರ ವೀರಶೈವ ಸಮಾಜಕ್ಕೆ ಹೊಸನಗರದಲ್ಲಿ ಜಾಗವನ್ನು ಮಂಜೂರು ಮಾಡಿ ಕೊಡಬೇಕೆಂದು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.
ತಾಲೂಕ್ ವ್ಯಾಪ್ತಿಯಲ್ಲಿ ವೀರಶೈವ ಸಮಾಜಕ್ಕೆ ಜಾಗವನ್ನು ಮಂಜೂರು ಮಾಡುವುದರ ಮೂಲಕ ಸಮಾಜದ ಬೆಳವಣಿಗೆಗೆ ಅನುಕೂಲ ಮಾಡಿಕೊಡಬೇಕೆಂದು ತಾಲೂಕ್ ವೀರಶೈವ-ಲಿಂಗಾಯಿತ ಪರಿಷತ್ ನ ಅಧ್ಯಕ್ಷರಾದ ಮೆಣಸೆ ಆನಂದ್ ರವರ ನೇತೃತ್ವದಲ್ಲಿ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ ರವರಿಗೆ ಮನವಿ ಸಲ್ಲಿಸಿದರು
ಈ ಸಂಧರ್ಭದಲ್ಲಿ ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ,ಹರಿದ್ರಾವತಿ ಗ್ರಾ ಪಂ ಮಾಜಿ ಅಧ್ಯಕ್ಷರಾದ ವಾಟಗೋಡು ಸುರೇಶ್ , ಹಾಗೂ ವೀರಶೈವ-ಲಿಂಗಾಯಿತ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು,ಗ್ರಾ ಪಂ ಸದಸ್ಯರುಗಳು, ಸಮಾಜದ ಪ್ರಮುಖರು ಉಪಸ್ಥಿತರಿದ್ದರು.