w
Headlines
Home » ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಎಸ್ಕೇಪ್!!!!!!

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಎಸ್ಕೇಪ್!!!!!!

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.

 ಕಳೆದ ಶನಿವಾರದಂದು ರಾತ್ರಿ ಸಾಗರ ರಸ್ತೆಯ ವಡಗೆರೆಯಲ್ಲಿರುವ ಉದ್ಯಮಿ ವೆಂಕಪ್ಪ ಶೆಟ್ಟಿ ರವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ CR 66/22, IPC 379 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಟ್ರಾಕ್ಟರ್ ಕಳ್ಳತನದ ಸಂಶಯದ ಮೇಲೆ ವಡಗೆರೆಯ ನಿವಾಸಿ ಪ್ರತಾಪ್ ರನ್ನು ಪತ್ತೆ ಮಾಡಿ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತಿತ್ತು.ಇಂದು ಬೆಳಿಗ್ಗೆ ಠಾಣೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ ಎಸಗಿ ಕಾಂಪೌಂಡ್ ಹಾರಿ ಪರಾರಿಯಾದ ಘಟನೆ ನಡೆದಿದೆ.

ಟ್ರ್ಯಾಕ್ಟರ್ ಕಳ್ಳತನ ಮಾಡಿದ ವ್ಯಕ್ತಿಯನ್ನು ಸೋಮವಾರ ಮಧ್ಯಾಹ್ನ ಸಂಶಯದ ಮೇಲೆ ವಿಚಾರಣೆಗಾಗಿ ಠಾಣೆಗೆ ಕರೆತರಲಾಗಿದ್ದು ರಾತ್ರಿಯೆಲ್ಲ ಠಾಣೆಯಲ್ಲಿಟ್ಟುಕೊಳ್ಳಲಾಗಿತ್ತು. ಇಂದು ಬೆಳಗ್ಗೆ ಶೌಚಾಲಯಕ್ಕೆ ಹೋದವನು ಹೊರಬರುತ್ತಿದ್ದಂತೆ ಅಲ್ಲೆ ಇದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಎಸಗಿ ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಿದ್ದಾನೆ.

ಕೂಡಲೇ ಎಚ್ಚೆತ್ತ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹುಡುಕಾಟದಲ್ಲಿ ನಿರತರಾಗಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.