ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು.
ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರಾದ ಮೊಹಮ್ಮದ್ ಝುಲ್ಪಿಕರ್ ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು.
ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು.ಈ ಸಂಧರ್ಭದಲ್ಲಿ ಶಿವಮೊಗ್ಗದ ಮುರ್ಷದ್ ರವರು ಸಂದಲ್ ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್ ಮೆರವಣಿಗೆಗೆ ರಂಗು ತಂದರು.ನೂರಾರು ಭಕ್ತಾದಿಗಳು ಸಂದಲ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ರಾತ್ರಿ ಎಲ್ಲಾ ಭಕ್ತಾಧಿಗಳಿಗೆ ದರ್ಗಾ ಕಮಿಟಿ ವತಿಯಿಂದ ಬೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್,ದರ್ಗಾ ಕಮಿಟಿ ಅಧ್ಯಕ್ಷರಾದ ದೂದ್ ಪೀರ್,ಕೆಂಚನಾಲ ಜಾಮೀಯ ಮಸೀದಿ ಅಧ್ಯಕ್ಷರಾದ ಅಬ್ದುಲ್ ಘನಿ ಮತ್ತು ಗ್ರಾಪಂ ಸದಸ್ಯರಾದ ಮೊಹಮ್ಮದ್ ಷರೀಫ್ ,ಪರಮೇಶಿ,ಪುಟ್ಟಣ್ಣ, ಲಕ್ಷಮ್ಮ,ಹೂವಮ್ಮ,ರಾಮಪ್ಪ ಹಾಗೂ ಖಲೀಲ್ ಷರೀಫ್, ಅಸ್ಲಂ ,ಅಕ್ಬರ್ , ಸಲೀಮ್ ,ತಬ್ರೇಜ್ , ಜಮೀಲ್ ,ಸೋನು ,ರಾಹಿಲ್ ,ಇಬ್ರಾಹಿಂ ಹಾಗೂ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್