ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ – ಕಿಮ್ಮನೆ ವಾಗ್ದಾಳಿ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ  ಭ್ರಷ್ಟಾಚಾರ ವಿರುದ್ಧ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು  ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪದಿಂದ ಶಿವಮೊಗ್ಗದವರೆಗೆ 4 ದಿನಗಳ ಕಾಲ ಪಾದಯಾತ್ರೆ ನೆಡೆಸುತ್ತಿರುವ ಕಿಮ್ಮನೆ ರತ್ನಾಕರ್ ಇಂದು ಮೂರನೇ ದಿನದ ಪಾದಯಾತ್ರೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿ ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ ಎಂದು ವಾಗ್ದಾಳಿ ನೆಡೆಸಿದರು.

ನಾನು ರಸ್ತೆ ಮಾಡಿಸಿದ್ದೀನಿ ಕಿಮ್ಮನೆ ಪಾದಯಾತ್ರೆ ಮಾಡಲಿ ಎಂಬ ಆರಗ ಜ್ಞಾನೇಂದ್ರ ಅವರು ನಿನ್ನೆ ಹೇಳಿದ ಹೇಳಿಕೆ ಬಗ್ಗೆ ಮಾತನಾಡಿದ ಕಿಮ್ಮನೆ ನಾನು ಅಭಿವೃದ್ಧಿ ಮಾಡಿದ್ದನ್ನು ಇವರು ಶಂಕು ಸ್ಥಾಪನೆ, ಉದ್ಘಾಟನೆ ಮಾಡಿದ್ದೂ ಬಿಟ್ಟರೆ ಏನು ಮಾಡಿದ್ದಾರೆ. ಶಿವಮೊಗ್ಗ – ತೀರ್ಥಹಳ್ಳಿ ರಸ್ತೆ ಮಾಡಿಸಿದ್ದು ನಾನು ಈಗ ಅವರು ಹೊಟ್ಟೆ ಹೊತ್ತುಕೊಂಡು ಓಡಾಡಲು ಅನುಕೂಲವಾಗಿದೆ ಎಂದರು. ತಲೆ ಮರೆಸಿಕೊಂಡಿರುವ ವ್ಯಕ್ತಿಗೆ ತಪ್ಪಿಸಿಕೊಂಡು ಹೋಗಿದ್ದಾನೆ ಎನ್ನಬೇಕು ಆದರೆ ಆರಗ ಜ್ಞಾನೇಂದ್ರ ಪ್ರವಾಸಕ್ಕೆ ಹೋಗಿದ್ದಾರೆ ಎಂದು ಹೇಳುತ್ತಾರೆ. ಅವರಿಗೆ ಕನ್ನಡ ಭಾಷೆಯಲ್ಲೇ ಸ್ವಲ್ಪ ಸಮಸ್ಯೆ ಇದೆ ಎಂದು ಹೇಳಿದರು.

ನಾನೇ ಬಹುತೇಕ ಕಡೆ ರಸ್ತೆ ಮಾಡಿಸಿದ್ದು ಅವರು 15 ವರ್ಷಗಳ ಕಾಲ ಶಾಸಕರಾಗಿದ್ದರು ಆ ಸಮಯದಲ್ಲಿ ರಸ್ತೆ ಮಾಡಿಸಬಹುದಿತ್ತಲ್ಲ. ನೀವೇ ಹೋಗಿ ಎಂಟು ಹೋಬಳಿಗಳಲ್ಲಿ ಕೇಳಿ ಕಿಮ್ಮನೆ ಬಂದ ಮೇಲೆ ರಸ್ತೆ ಆಗಿದ್ದು ಎನ್ನುತ್ತಾರೆ ಹೊರತು ಆರಗ ಜ್ಞಾನೇಂದ್ರರ ಹೆಸರು ಹೇಳುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಅವರು ಕಳೆದು ಹೋಗುತ್ತಾರೆ ಎಂದು ತಿಳಿಸಿದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

8 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

10 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

11 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

11 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago