ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕ ಪಡೆದು ಅದ್ವಿತೀಯ ಸಾಧನೆಗೈದ ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಗುಡಿ ಗ್ರಾಮದ ರೈತ ಕುಟುಂಬದ ಕುಮಾರಿ ಸ್ಪಂದನ ಷಣ್ಮುಖಪ್ಪನವರಿಗೆ ಹೊಸನಗರ ತಾಲ್ಲೂಕ್ ವೀರಶೈವ-ಲಿಂಗಾಯಿತ ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭಾನುವಾರ ವೀರಶೈವ – ಲಿಂಗಾಯತ ಪರಿಷತ್ ತಾಲೂಕ್ ಅಧ್ಯಕ್ಷರಾದ ಆನಂದ್ ಮೆಣಸೆ ರವರು ಹಾಗೂ ಪದಾಧಿಕಾರಿಗಳು ಸ್ಪಂದನ ಷಣ್ಮುಖಪ್ಪ ರವರ ಮನೆಗೆ ತೆರಳಿ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಹೊಸನಗರ ತಾ.ಪಂ.ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ, ಗ್ರಾಪಂ ಸದಸ್ಯರಾದ ಮಲ್ಲಿಕಾರ್ಜುನ, ಸಚಿನ್ಗೌಡ, ಪ್ರವೀಣ ಎಂ. ಗುಡ್ಡೆಕೊಪ್ಪ,ಕೀರ್ತಿ ಕೆ ಗೌಡ ಹಾಗೂ ಪರಿಷತ್ತಿನ ಪದಾಧಿಕಾರಿಗಳು ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್