ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ. ಶೇಕಡ ನೂರರಷ್ಟು ಫಲಿತಾಂಶ ಪಡೆಯುವುದು ಹೇಗೆ ಗೊತ್ತಾ……!?

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಖಾಸಗಿ ಶಾಲೆಯೊಂದು ತನ್ನ ವಿದ್ಯಾ ಸಂಸ್ಥೆಯ ಪ್ರತಿಷ್ಠೆಗಾಗಿ 9ನೇ ತರಗತಿಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿರುವ  ಮಕ್ಕಳನ್ನು 9ನೇ ತರಗತಿಯಲ್ಲಿ ಅನುತ್ತೀರ್ಣ ಗೊಳಿಸಿ ಕಲಿಕೆಯಲ್ಲಿ ಮುಂದಿರುವ ಮಕ್ಕಳನ್ನು 10 ನೇ ತರಗತಿಗೆ ದಾಖಲಿಸಿಕೊಂಡು ಪ್ರತಿಶತ ನೂರು ಫಲಿತಾಂಶವನ್ನು ಪಡೆಯುತ್ತಿದೆ ಎಂಬ ಆರೋಪ ಪೋಷಕ ವಲಯದಲ್ಲಿ ಕೇಳಿಬಂದಿದೆ.

ೋಷಕರಿಂದ 1 ರಿಂದ 9ನೇ ತರಗತಿ ತನಕ ಸಾವಿರಾರು ರೂಪಾಯಿಗಳ ಶುಲ್ಕವನ್ನು ಪಡೆದುಕೊಂಡು 9ನೇ ತರಗತಿ ತನಕ ತಮ್ಮ ಸಂಸ್ಥೆಯಲ್ಲಿ ಶಿಕ್ಷಣ ನೀಡಿ 9ನೇ ತರಗತಿ ಯಲ್ಲಿ ಸ್ವಲ್ಪ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಅನುತ್ತೀರ್ಣ ಗೊಳಿಸಿ ಎಸೆಸೆಲ್ಸಿಯಲ್ಲಿ ಬುದ್ಧಿವಂತ ಮಕ್ಕಳನ್ನು ಇಟ್ಟುಕೊಂಡು ಪ್ರತಿಶತ 100% ಫಲಿತಾಂಶ ಪಡೆದು ಸಾರ್ವಜನಿಕರಲ್ಲಿ ಒಳ್ಳೆಯ ಭಾವನೆ ಮೂಡಿಸಿ  ಸಾವಿರಾರು  ರೂಪಾಯಿ ಹಣ ವಸೂಲಿ ಮಾಡುವ ಕಾರ್ಯವನ್ನು ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಜಿಲ್ಲಾದ್ಯಂತ  ನಾಲ್ಕೈದು ವಿದ್ಯಾ ಸಂಸ್ಥೆ ನಡೆಸುತ್ತಿರುವ ಈ ಖಾಸಗಿ ವಿದ್ಯಾಸಂಸ್ಥೆ ಹೆಸರಿಗೆ ದಾಖಲಾತಿ ಸಮಯದಲ್ಲಿ ವಿವಿಧ ಆಮಿಷಗಳನ್ನು ಒಡ್ಡಿ ಮಕ್ಕಳನ್ನು ದಾಖಲಾತಿ ಮಾಡಿಸಿಕೊಂಡು ಕೊನೆಹಂತದಲ್ಲಿ ಮಕ್ಕಳ ಭವಿಷ್ಯಕ್ಕೆ ಕೊಡಲಿಪೆಟ್ಟು ನೀಡುತ್ತಿರುವುದು ಮಕ್ಕಳನ್ನು ಮಾನಸಿಕವಾಗಿ ಬ್ಲಾಕ್ ಮೇಲ್ ಮಾಡುವುದು ಎಷ್ಟು ಸರಿ ಎಂಬುದೇ ಪೋಷಕರ ಪ್ರಶ್ನೆಯಾಗಿದೆ.

ವಿದ್ಯೆಯೆಂದರೆ ಸರ್ವರಿಗೂ ನೀಡಬೇಕಾಗಿದ್ದು ಏನೂ ಇಲ್ಲದ ವಿದ್ಯಾರ್ಥಿಯನ್ನು ಕಲಿಕೆಯಲ್ಲಿ ತೊಡಗಿಸಿ ವಿದ್ಯಾರ್ಥಿಯನ್ನು ಉತ್ತಮ ಪ್ರಜೆಯನ್ನಾಗಿ ಮಾಡಿ ಹಿಂದುಳಿದ ಮಕ್ಕಳನ್ನು ಮುಂದೆ ತಂದು ನಿಲ್ಲಿಸಬೇಕಾಗಿತ್ತು. ಜೊತೆಗೆ ಆ ವಿದ್ಯಾರ್ಥಿಗಳಿಗೂ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತಿರ್ಣ ಗೊಳಿಸಿದರೆ ಮಾತ್ರ ಅದು ನಿಜವಾದ ನಿಸ್ವಾರ್ಥ ಶಾಲೆ ಆದರೆ ಅದಕ್ಕೆ ಅಪಾರ್ಥ ಎಂಬಂತೆ ಶಿಕ್ಷಣ ಎಂದರೆ ಹಣಕಾಸಿನ ಧಂದೆ ಎಂದು ತಿಳಿದುಕೊಂಡಿರುವ ಖಾಸಗಿ ಶಾಲೆಯು ಈ ಸುಸಂಸ್ಕೃತ ಊರಿಗೆ ಕಪ್ಪುಚುಕ್ಕೆಯಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಮಾತನಾಡಿಕೊಳ್ಳುತಿದ್ದಾರೆ.


ಶಾಲೆಯ ದಾಖಲಾತಿ ಸಂಧರ್ಭದಲ್ಲಿ ಮುಗ್ಧ ಪೋಷಕರಿಗೆ  ನುರಿತ ಶಿಕ್ಷಕರು ಕಾರ್ಯನಿರ್ವಹಿಸುವ ಶಾಲೆ ಎಂದು ಜಾಹೀರಾತಿನಲ್ಲಿ ಪ್ರಕಟಿಸಿ ನಂತರ ಪಿಯುಸಿ,ಡಿಗ್ರಿ ಪಾಸಾದವರನ್ನು ಕರೆತಂದು ಮೂರು ನಾಲ್ಕು ಸಾವಿರ ಸಂಬಳಕ್ಕೆ ಬಳಸಿಕೊಂಡು ಕಳಪೆ ಮಟ್ಟದ ಶಿಕ್ಷಣ ಕೊಡುವಲ್ಲಿ ಈ ವಿದ್ಯಾ ಸಂಸ್ಥೆ ಎತ್ತಿದ ಕೈ ಎನ್ನಲಾಗುತ್ತಿದೆ.

ಸಿರಿವಂತರ ಮಕ್ಕಳೇ ಹೆಚ್ಚಾಗಿ ದಾಖಲಾಗುತ್ತಿರುವ ಖಾಸಗಿ ಶಾಲೆಯಲ್ಲಿ ಭವಿಷ್ಯದ ಕನಸು ಕಂಡು ದಾಖಲಾದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡದೆ ಭವಿಷ್ಯವನ್ನು ಕತ್ತಲಲ್ಲಿ ಇಡುವ ಇಂತಹ ಶಿಕ್ಷಣ ಸಂಸ್ಥೆ ಅದೆಂತಹ ನೈತಿಕ ಶಿಕ್ಷಣ ನೀಡಬಹುದು ಎಂಬುದು ಸಾರ್ವಜನಿಕರ ಯಕ್ಷಪ್ರಶ್ನೆಯಾಗಿದೆ.

“ಒಟ್ಟಾರೆಯಾಗಿ ಬುದ್ದಿವಂತ ಮಕ್ಕಳನ್ನು ಮಾತ್ರ ಸೇರಿಸಿಕೊಂಡು 100% ತೆಗೆಯುವ ಖಾಸಗಿ ಶಾಲೆಗಳಿಗಿಂತ ಎಲ್ಲಾ ತರಹದ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು ಅವರನ್ನು ತಿದ್ದಿ ತೀಡಿ ನೈತಿಕ ಶಿಕ್ಷಣ ನೀಡುವ ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಶಿಕ್ಷಕರೇ ಉತ್ತಮ ಅಲ್ವಾ…!!!””
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

22 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

22 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

23 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago