ಆಗುಂಬೆ : ಕಳೆದ ವಾರ ಮನೆಯಿಂದ ನಾಪತ್ತೆಯಾಗಿದ್ದ ಯುವಕನೊಬ್ಬ ಸ್ಮಶಾನದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ನಡೆದಿದೆ.
ಚನ್ನಗಿರಿ ತಾಲೂಕಿನ ಕಾಗತ್ತೂರು ಗ್ರಾಮದ ಎಂ.ಕೆ.ಸ್ವಾಮಿ(27) ಮೃತಪಟ್ಟಿರುವ ದುರ್ಧೈವಿಯಾಗಿದ್ದಾನೆ.ಆಗುಂಬೆ ಗ್ರಾಮದ ಸ್ಮಶಾನದ ಶೆಡ್ನಲ್ಲಿ ಈತ ನೇಣಿಗೆ ಶರಣಾಗಿದ್ದಾನೆ.
ಮೇ 24ರಂದು ಸ್ವಾಮಿ ನಾಪತ್ತೆಯಾಗಿದ್ದ. ಮಗ ಕಾಣೆಯಾದ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಯುವಕನ ಮೊಬೈಲ್ ನೆಟ್ವರ್ಕ್ ಆಧರಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.
ಆಗುಂಬೆಯ ಸ್ಮಶಾನದಲ್ಲಿ ಡೆತ್ನೋಟ್ ಬರೆದಿಟ್ಟು ದುರಂತ ಅಂತ್ಯಕಂಡಿದ್ದಾನೆ.
‘ಅಪ್ಪ.. ಅಣ್ಣ.. ನನ್ನನ್ನು ಕ್ಷಮಿಸಿ’ ಎಂದು ಡೆತ್ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.