ತೀರ್ಥಹಳ್ಳಿಯಲ್ಲಿ ಅಕ್ರಮ ಮರಳು ಸಾಗಾಟ : ಲಾರಿಗಳು ಸೀಜ಼್ !!!!!!


ತೀರ್ಥಹಳ್ಳಿ ತಾಲೂಕಿನ ಹಲವು ಮರಳು ಕ್ವಾರೆಗಳಲ್ಲಿ ನಿರಂತರವಾಗಿ ಮರಳು ಅಕ್ರಮ ಸಾಗಾಣಿಕೆ ಆಗುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಪೊಲೀಸ್ ಇಲಾಖೆಗಳು  ಕಣ್ಣುಮುಚ್ಚಿ ಮೌನವಸ್ಥೆಯಲ್ಲಿ ಇರುವುದಕ್ಕೆ   ಗೃಹಸಚಿವರ ತವರೂರಿನ ಅಕ್ರಮ ಮರಳು ಸಾಗಾಟ ಪ್ರಕರಣವೇ ಸಾಕ್ಷಿಯಾಗಿದೆ.


ಭಾನುವಾರ ಸಂಜೆಯ ವೇಳೆ ಮರಳನ್ನ ಡಬ್ಲಿಂಗ್ ಮಾಡಿಕೊಂಡು ಬರುತ್ತಿದ್ದ ಲಾರಿಯನ್ನ ಯಾರೋ ಒಬ್ಬರು ಪೊಲೀಸ್ ಇಲಾಖೆ ಮಾಹಿತಿ ನೀಡಿ ಅದನ್ನು ಕುಶಾವತಿ ಬಳಿ  ಹಿಡಿಸುವ ಸ್ಥಿತಿ ಬಂದಿದೆ ಎಂದರೆ ಗೃಹಸಚಿವರ ತವರಿನಲ್ಲಿ ಎಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಅರ್ಥವಾಗುತ್ತದೆ.


ತಾಲೂಕಿನ ಮಳಲೂರು, ಆಂದಿನಿ, ಬುಕ್ಲಾಪುರ  ಪ್ರತಿದಿನ ಡಬ್ಲಿಂಗ್ ಮಾಡಲಾಗುತ್ತದೆ. ಆದರೆ ಇಲ್ಲಿ ಯಾವ ರೀತಿಯ  ತಪಾಸಣೆಯೂ ನಡೆಯೊಲ್ಲ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳೀಯರ ಫೋನೇ ತೆಗೆದು ಮಾತನಾಡೊಲ್ಲವೆಂಬುದು ಸ್ಥಳೀಯರ ಆರೋಪವಾಗಿದೆ. ಹಾಗಾದರೆ ಇಲಾಖೆ ಇದ್ದು ಏನು ಮಾಡ್ತಿದೆ ಎಂಬುದೇ ಯಕ್ಷ  ಪ್ರಶ್ನೆಯಾಗಿದೆ.


ಪ್ರತಿದಿನ ನಡೆಯುತ್ತೆ ಡಬ್ಲಿಂಗ್ !

ಮಾಮೂಲಿಯಾಗಿ ಮರಳು ಕ್ವಾರೆ ನಿಯಮದ ಪ್ರಕಾರ 8½ ಟನ್ ಮರಳನ್ನ ಮಾತ್ರ ಲಾರಿಗೆ ತುಂಬಿಸಬೇಕೆಂಬ ನಿಯಮವಿದೆ. ಆದರೆ ಈ ನಿಯಮವನ್ನೆಲ್ಲಾ ಗಾಳಿಗೆ ತೂರಿಲಾಗಿದೆ ಒಂದು ಲಾರಿಗೆ 25 ಟನ್ ಮರಳನ್ನ ತುಂಬಲಾಗುತ್ತದೆ. ಇದನ್ನೇ ಡಬ್ಲಿಂಗ್ ಎನ್ನಲಾಗುತ್ತದೆ. ಒಂದೇ ಬಿಲ್ಲು ಹಿಡಿದು 3 ಪಟ್ಟು ಲೋಡ್ ಹೆಚ್ಚಾಗುತ್ತದೆ.

ಕೋರೆಗಳಲ್ಲಿ ಡಬ್ಲಿಂಗ್ ಮಾಡಿ ವಿಪರೀತ ಮರಳು ತುಂಬುತ್ತಿರುವ ಗುತ್ತಿಗೆದಾರನ ವಿರುದ್ಧ ಕ್ರಮ ಜರುಗಿಸುವುದು ಯಾವಾಗ ?

ಭಾನುವಾರ  ರಾತ್ರಿ ಮೂರು ಲಾರಿಗಳನ್ನು ಸೀಜ್ ಮಾಡಿದ್ದು ಸೀಜ್ ಆದ ಪ್ರತಿ ಲಾರಿಗಳಲ್ಲಿ ಪತ್ತೆಯಾದ ಮರಳು ಬರೋಬ್ಬರಿ  25 ಟನ್ ಲೋಡು. ಹೀಗೆ ತುಂಬುವ ಲಾರಿಗಳನ್ನ ಮಾತ್ರ ಸೀಜ್ ಮಾಡುವುದು ಮಾತ್ರವಲ್ಲದೆ ಗುತ್ತಿಗೆದಾರನ ವಿರುದ್ಧ ಕ್ರಮಜರುಗಿಸಬೇಕು.
ಆದರೆ ಕ್ರಮ ಜರುಗಿಸಲು ಯಾವ ಅಧಿಕಾರಿಗಳು ಮುಂದೆ ಬರೋಲ್ಲ . ಪೂರ್ಣ ವಿಷಯ ಗೊತ್ತಿದ್ದರೂ
ಯಾವುದೇ ಕಾರಣಕ್ಕೂ ಲಾರಿಗಳನ್ನು ತಪಾಸಣೆ ಮಾಡದೇ ಮೌನವಹಿಸಿರುವುದು ತಾಲೂಕಿನ ಜನರಲ್ಲಿ ಜಗ ಜಾಹೀರಾತಾಗಿದೆ. ಅಥವಾ ಅಧಿಕಾರಿಗಳೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬುದು ಸಾರ್ವಜನಿಕರ ಮಾತಾಗಿದೆ.

ತಾಲೂಕಿನಾದ್ಯಂತ ಹೇರಳವಾಗಿರುವ ಅಕ್ರಮ ಮರಳು ಲೂಟಿಯಾಗುವುದನ್ನು  ತಡೆಯುವುದು ಯಾವಾಗ?

ತೀರ್ಥಹಳ್ಳಿಯಲ್ಲಿ ವ್ಯಾಪಕವಾಗಿ ಮರಳು ಲೂಟಿ ಆಗುತ್ತಿದೆ. ಇದು ಗೃಹಸಚಿವರಿಗೆ ಗೊತ್ತಿರದೆ ಇರಲು ಸಾಧ್ಯವೇ ಇಲ್ಲ. ಗೊತ್ತಿದ್ದೂ ಅಕ್ರಮ ಮರಳುಗಾರಿಕೆಗೆ ಇವರೇ ಕುಮ್ಮಕ್ಕು ನೀಡುತ್ತಿದ್ದರೆ ಅದಕ್ಕೆ ಯಾರು ಏನು ಮಾಡಬೇಕೋ ಗೊತ್ತಿಲ್ಲ. ಒಂದು ವೇಳೆ ಗೃಹಸಚಿವರಿಗೆ ವಿಷಯ ತಿಳಿಯದಿದ್ದರೆ ಕ್ರಮ ಜರುಗಿಸುವ ಅವಶ್ಯಕತೆ ಇದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago