ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ದ್ವಿಚಕ್ರ ವಾಹನಗಳ ಮುಖಾಮುಖಿ‌ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ‌ ನೆಲವಾಗಿಲು ಬಳಿ ಸಂಭವಿಸಿದೆ.
ಬೆಳಿಗ್ಗೆ ಶಿಕಾರಿಪುರದಿಂದ ಮೂವರು ಯುವಕರು ನೆಲವಾಗಿಲು ಕಡೆ ತೆರಳಿದ್ದರು.ರಾತ್ರಿ ಅಲ್ಲಿಂದ ಹಿಂದಿರುಗುವ ವೇಳೆ ಎದುರಿನಿಂದ ಬಂದ ಬೈಕ್ ಗೆ ಮುಖಾಮುಖಿ ಡಿಕ್ಕಿಯಾಗಿದೆ.
ಈ ಅಪಘಾತದಲ್ಲಿ  ಪಾರಿವಾಳ ಶಿವರಾಮಣ್ಣ ಎಂಬುವರ ಮಗ ಕೊಟ್ರೇಶ್(25)  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಬೈಕ್ ನಲ್ಲಿದ್ದ ಇನ್ನಿಬ್ಬರು ಮತ್ತು ಎದುರಿನಿಂದ ಬಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

1 hour ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

5 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

5 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

20 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

20 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago