January 11, 2026

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹತಾಯಿ : ಎಲ್ಲಿ ಗೊತ್ತಾ…???? ಈ ಸುದ್ದಿ ನೋಡಿ….

ಅವಳಿ ಮಕ್ಕಳು ಜನಿಸುವುದು ಸಾಮಾನ್ಯ, ಇನ್ನೂ ಕೆಲವು ಮಹಿಳೆಯರು ತ್ರಿವಳಿ ಮಕ್ಕಳಿಗೂ ಜನ್ಮ ನೀಡಿದ ಉದಾಹರಣೆಗಳಿವೆ. ಆದರೆ ಒಟ್ಟಿಗೆ ನಾಲ್ಕು ಮಕ್ಕಳು ಹುಟ್ಟಿರುವುದು ಸ್ವಲ್ಪ ವಿರಳ. ಶಿವಮೊಗ್ಗದ ಮಹಿಳೆಯೊಬ್ಬರು ಒಂದೇ ಬಾರಿಗೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿ ಸುದ್ದಿಯಾಗಿದ್ದಾರೆ.

ಇಂದು ಬೆಳಗ್ಗೆ ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ ಅಲ್ಮಾ ಬಾನು ಎಂಬುವವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ವಿಷಯವೇನೆಂದರೆ ಅಲ್ಮಾ ಬಾನು ಅವರಿಗೆ ಎರಡು ಗಂಡು, ಎರಡು ಹೆಣ್ಣು ಮಕ್ಕಳು ಜನಿಸಿವೆ.

ಆರೀಫ್ ಮತ್ತು ಅಲ್ಮಾ ಬಾನು ದಂಪತಿ ಭದ್ರಾವತಿ ತಾಲೂಕಿನ ತಡಸ ಗ್ರಾಮದವರಾಗಿದ್ದು, ತಾಯಿ ಜೊತೆಗೆ ನಾಲ್ಕು ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *