Headlines

ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ ಫಲಶ್ರುತಿ : ರಾಷ್ಟ್ರೀಯ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ

ಮಲೆನಾಡಿನ ಹೆಮ್ಮೆಯ ಪುತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ  ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು  ಪೂಜಿತ ಗೌಡಳಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.


ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ 19 ಬಾರಿ ಭಾಗವಹಿಸಿದ ಪೂಜಿತ ಗೌಡ ಇದೇ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಖೇಲ್ ಇಂಡಿಯಾ ಹಾಕಿ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಹಾಕಿ ತಂಡದಿಂದ ಭಾಗವಹಿಸಿ  ಅದ್ವಿತೀಯ ಪ್ರದರ್ಶನ ನೀಡಿ ರಾಜ್ಯಕ್ಕೆ ಕೀರ್ತಿ ತಂದ ಹಿನ್ನೆಲೆಯಲ್ಲಿ  ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ  ಮೈಸೂರಿನ ಕ್ರೀಡಾ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದ ಪೂಜಿತ ಗೌಡಳನ್ನು ಗುಡ್ಡೆಕೊಪ್ಪ ದಲ್ಲಿರುವ ತಮ್ಮ ಸ್ವಗೃಹಕ್ಕೆ  ಕರೆಸಿಕೊಂಡು ಅಭಿನಂದನೆ ಸಲ್ಲಿಸುವುದರ ಜೊತೆಗೆ ವೈಯಕ್ತಿಕವಾಗಿ ಆರ್ಥಿಕ ನೆರವು ಸಹ ನೀಡಿದರು.


ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ ಫಲಶ್ರುತಿ : 

ಹಾಕಿ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ 19 ಬಾರಿ  ಭಾಗವಹಿಸಿ ಅದ್ವಿತೀಯ ಪ್ರದರ್ಶನವನ್ನು ನೀಡುತ್ತಿದ್ದರೂ ಸಹ ಎಲೆಮರೆಯ ಕಾಯಿಯಂತಿದ್ದ ಪೂಜಿತ ಗೌಡಳಿಗೆ ಸನ್ಮಾನಿಸಿ,ಅಭಿನಂದಿಸಿ ಸಂದರ್ಶನ ಮಾಡಿ ವಿಸ್ತೃತ ವರದಿಯನ್ನು ಪ್ರಕಟಿಸಿದ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ  ಫಲಶ್ರುತಿಯಿಂದ ಒಂದೇ ವಾರದಲ್ಲಿ ಐದಕ್ಕೂ ಹೆಚ್ಚು ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮಗಳು ನಡೆಯಲು ಕಾರಣವಾಯಿತು. 

ಇದು ಪೋಸ್ಟ್ ಮ್ಯಾನ್ ಸುದ್ದಿ ಬಳಗಕ್ಕೆ ಹೆಮ್ಮೆಯ ಸಂಗತಿ

Leave a Reply

Your email address will not be published. Required fields are marked *