ಮಲೆನಾಡಿನ ಹೆಮ್ಮೆಯ ಪುತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ 19 ಬಾರಿ ಭಾಗವಹಿಸಿದ ಪೂಜಿತ ಗೌಡ ಇದೇ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಖೇಲ್ ಇಂಡಿಯಾ ಹಾಕಿ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಹಾಕಿ ತಂಡದಿಂದ ಭಾಗವಹಿಸಿ ಅದ್ವಿತೀಯ ಪ್ರದರ್ಶನ ನೀಡಿ ರಾಜ್ಯಕ್ಕೆ ಕೀರ್ತಿ ತಂದ ಹಿನ್ನೆಲೆಯಲ್ಲಿ ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ ಮೈಸೂರಿನ ಕ್ರೀಡಾ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದ ಪೂಜಿತ ಗೌಡಳನ್ನು ಗುಡ್ಡೆಕೊಪ್ಪ ದಲ್ಲಿರುವ ತಮ್ಮ ಸ್ವಗೃಹಕ್ಕೆ ಕರೆಸಿಕೊಂಡು ಅಭಿನಂದನೆ ಸಲ್ಲಿಸುವುದರ ಜೊತೆಗೆ ವೈಯಕ್ತಿಕವಾಗಿ ಆರ್ಥಿಕ ನೆರವು ಸಹ ನೀಡಿದರು.
ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ ಫಲಶ್ರುತಿ :
ಹಾಕಿ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ 19 ಬಾರಿ ಭಾಗವಹಿಸಿ ಅದ್ವಿತೀಯ ಪ್ರದರ್ಶನವನ್ನು ನೀಡುತ್ತಿದ್ದರೂ ಸಹ ಎಲೆಮರೆಯ ಕಾಯಿಯಂತಿದ್ದ ಪೂಜಿತ ಗೌಡಳಿಗೆ ಸನ್ಮಾನಿಸಿ,ಅಭಿನಂದಿಸಿ ಸಂದರ್ಶನ ಮಾಡಿ ವಿಸ್ತೃತ ವರದಿಯನ್ನು ಪ್ರಕಟಿಸಿದ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ ಫಲಶ್ರುತಿಯಿಂದ ಒಂದೇ ವಾರದಲ್ಲಿ ಐದಕ್ಕೂ ಹೆಚ್ಚು ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮಗಳು ನಡೆಯಲು ಕಾರಣವಾಯಿತು.
ಇದು ಪೋಸ್ಟ್ ಮ್ಯಾನ್ ಸುದ್ದಿ ಬಳಗಕ್ಕೆ ಹೆಮ್ಮೆಯ ಸಂಗತಿ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್