ಸಾಗರ : ತಾಲ್ಲೂಕಿನ ಅರಳಗೋಡಿನಲ್ಲಿ ಮಂಗನ ಕಾಯಿಲೆಗೆ ಅಲ್ಲಿನ ಗ್ರಾಮಪಂಚಾಯ್ತಿ ಸದಸ್ಯರೊಬ್ಬರು ಸಾವನ್ನಪ್ಪಿದ್ದಾರೆ.
55 ವರ್ಷದ ರಾಮಸ್ವಾಮಿ ಕರುಮನೆ ಎಂಬುವರು ಮೃತರು. ಕಳೆದ ಎಪ್ರಿಲ್ 24 ರಂದು ಇವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಜ್ವರ ಇನ್ನೂ ಹೆಚ್ಚಾದ ಕಾರಣ ಹೀಗಾಗಿ ಮಣಿಪಾಲದ ಕಸ್ತೂರಿಬಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಸ್ವಾಮಿಯವರು ಇಂದು ಮಧ್ಯಾಹ್ನ ದ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.