ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಮುಂದಾಗಲಾಗಿದೆ. ಆನ್‌ಲೈನ್ ಮೂಲಕ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ 3
ಹುದ್ದೆಯ ಹೆಸರು: ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್
ಸ್ಟೈಪೆಂಡ್: 8000-9000 ರೂ ಪ್ರತಿ ತಿಂಗಳು
ಹುದ್ದೆ – ಹುದ್ದೆ ಸಂಖ್ಯೆ -ವಿದ್ಯಾರ್ಹತೆ -ವೇತನ
ಪದವೀಧರ ಅಪ್ರೆಂಟಿಸ್ – 112
ಡಿಪ್ಲೋಮಾ ಅಪ್ರೆಂಟಿಸ್ -71-
ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಪ್ರೆಂಟಿಸ್ಕಿಪ್ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ
ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 15,2022
NATS ಪೋರ್ಟಲ್‌ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ: ಜೂನ್ 10 ಆಗಿದೆ
ಶಾರ್ಟ್‌ಲಿಸ್ಟ್ ಮಾಡಿದ ಪಟ್ಟಿಯ ಘೋಷಣೆಯ ದಿನಾಂಕ: ಜೂನ್ 15, ಮೆಸ್ಕಾಂನಲ್ಲಿ ಪ್ರಮಾಣಪತ್ರಗಳ ಪರಿಶೀಲನೆಯ ದಿನಾಂಕ: 27 ಮತ್ತು 28 ಜೂನ್ 2022 ಆಗಿರಬಹುದು
ಪ್ರಮುಖ ಲಿಂಕ್‌ಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: mescom.karnataka.gov.in
ಅಭ್ಯರ್ಥಿಗಳು ಅಪ್ರೆಂಟಿಸ್ ಪೋರ್ಟಲ್
https://portal.mhrdnats.gov.in/boat/login/user_login.action ಬಳಸಿ ನೋಂದಾಯಿಸಿಕೊಳ್ಳಬೇಕು.
– ಬಳಿಕ ಮೆಸ್ಕಾಂ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ, ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
– ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸುಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿರಿಸಿಕೊಳ್ಳಿ.
– ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
– ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.