ಮೆಸ್ಕಾಂ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಮುಂದಾಗಲಾಗಿದೆ. ಆನ್‌ಲೈನ್ ಮೂಲಕ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15 ಆಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ 3

ಹುದ್ದೆಯ ಹೆಸರು: ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್

ಸ್ಟೈಪೆಂಡ್: 8000-9000 ರೂ ಪ್ರತಿ ತಿಂಗಳು

ಹುದ್ದೆ – ಹುದ್ದೆ ಸಂಖ್ಯೆ -ವಿದ್ಯಾರ್ಹತೆ -ವೇತನ

ಪದವೀಧರ ಅಪ್ರೆಂಟಿಸ್ – 112
ಡಿಪ್ಲೋಮಾ ಅಪ್ರೆಂಟಿಸ್ -71-

ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಪ್ರೆಂಟಿಸ್ಕಿಪ್ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 15,2022

NATS ಪೋರ್ಟಲ್‌ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ: ಜೂನ್ 10 ಆಗಿದೆ

ಶಾರ್ಟ್‌ಲಿಸ್ಟ್ ಮಾಡಿದ ಪಟ್ಟಿಯ ಘೋಷಣೆಯ ದಿನಾಂಕ: ಜೂನ್ 15, ಮೆಸ್ಕಾಂನಲ್ಲಿ ಪ್ರಮಾಣಪತ್ರಗಳ ಪರಿಶೀಲನೆಯ ದಿನಾಂಕ: 27 ಮತ್ತು 28 ಜೂನ್ 2022 ಆಗಿರಬಹುದು

ಪ್ರಮುಖ ಲಿಂಕ್‌ಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: mescom.karnataka.gov.in
ಅಭ್ಯರ್ಥಿಗಳು ಅಪ್ರೆಂಟಿಸ್ ಪೋರ್ಟಲ್
https://portal.mhrdnats.gov.in/boat/login/user_login.action ಬಳಸಿ ನೋಂದಾಯಿಸಿಕೊಳ್ಳಬೇಕು.
– ಬಳಿಕ ಮೆಸ್ಕಾಂ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ, ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

– ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸುಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿರಿಸಿಕೊಳ್ಳಿ.

– ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

– ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

22 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

22 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

23 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago