ಮೇ 13 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ :

ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ 48ನೇ ಉರೂಸ್ ಸಮಾರಂಭ ಮೇ 13ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಸದಸ್ಯ ಅರ್ ಎ ಚಾಬುಸಾಬ್ ತಿಳಿಸಿದರು.

ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 13ರಂದು ನಗರ ವೆಂಕಟರಮಣಉಡುಪ ನೇತೃತ್ವದಲ್ಲಿ ಚಾಲನೆಗೊಳ್ಳಲಿರುವ ಉರೂಸ್‌ನ್ನು ಕಾರ್ಗಲ್‌ನ ಜನಾಬ್ ಎಸ್.ಇ.ಸಿರಾಜ್ ತಂಗಳ್ ಉದ್ಘಾಟಿಸಲಿರುವರು.

ಮೇ 14ರಂದು ಮಗರಿಬ್ ನಮಾಜ್ ಬಳಿಕ ಮೌಲೂದ್, ಸಲಾತ್‌ ನಡೆಯಲಿದ್ದು, ಧಾರ್ಮಿಕ ಪ್ರವಚನ ನಡೆಯಲಿದೆ. ಮೇ 15ರಂದು ಶಿವಮೊಗ್ಗದ ಮಲಪ್ಪುರಂನ ಸಯ್ಯಿದ್ ಶಹೀದುದ್ದೀನ್ ತಂಗಳ್ ನೇತೃತ್ವದಲ್ಲಿ ಸಂದಲ್ ಮೆರವಣಿಗೆ, ಬಳಿಕ ಸಯ್ಯಿದ್‌ಅಬೂಬುಕರ್ ಸಿದ್ದೀಕ್ ಅಲ್‌ಹಾದಿ ತಂಗಳ್ ಅವರು ಆಶೀರ್ವಚನ ನೀಡಲಿದ್ದಾರೆ.

ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಎನ್.ಕೆ.ಎಂ.ಶಾಫಿ ಸಅದಿ ಭಕ್ತಾದಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿರುವರು. ಮಹಮದ್ ಮಿಹರಾಜುದ್ದೀನ್‌ರಝಾಖಾದ್ರಿಅಲ್‌ಅಸ್ ಅದಿ ಅವರಿಂದ ನಾತ್‌ಎಶರೀಫ್ ನೆರವೇರಿಸಲಿದ್ದಾರೆ. ಮೇ 16ರಂದು ಧಾರ್ಮಿಕ ಕಾರ‍್ಯಕ್ರಮಗಳು ನಡೆಯಲಿದ್ದು, ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಮಾಹಿತಿ ನೀಡಿದರು.

ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸುವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ದರ್ಗಾದ ಆವರಣದಲ್ಲಿ ಹೆಚ್ಚುವರಿ ಸ್ಥಳಾವಕಾಶಕ್ಕೆ ಅಗತ್ಯ ಕಾಮಗಾರಿ ಭರದಿಂದ ನಡೆಯುತ್ತಿದೆ. ಉರೂಸ್ ಸಮಾರಂಭವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಮಾಜದ ಪ್ರಮುಖರ ಸಹಕಾರವನ್ನು ಕೋರಲಾಗಿದ್ದು, ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ದರ್ಗಾ ಸಮಿತಿ ಅಧ್ಯಕ್ಷ ಜಿ.ಮಹಮದ್ ಸಾಬ್, ಉಪಾಧ್ಯಕ್ಷ ಅಬ್ಬಾಸ್, ಉರೂಸ್ ಸಮಿತಿಯ ಅಧ್ಯಕ್ಷ ವಿನಾಯಕ ಉಡುಪ, ಪದಾಧಿಕಾರಿಗಳಾದ ಅಮೀರ್ ಹಂಜಾ, ಕಚ್ಚಿಗೆಬೈಲು ಸಾದಿಕ್ ಅಲಿ, ಅಬ್ದುಲ್‌ಖಾದರ್, ಅಬ್ದುಲ್ಲಾ ಸಾಬ್‌ ಮತ್ತಿತರರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

15 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

19 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

19 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

2 days ago