ಗ್ರಾಮೀಣ ಪ್ರದೇಶದ ವರಾಹಿ ಸಾವೆಹಕ್ಲು ಮುಳುಗಡೆ ಸಂತ್ರಸ್ಥರ ಕಡು ಬಡತನದ ಕುಟುಂಬದಲ್ಲಿ ಹುಟ್ಟಿ ಪ್ರಾಥಮಿಕ ಶಿಕ್ಷಣ ವನ್ನು ಸರಕಾರಿ ಶಾಲೆಯಲ್ಲಿ ಪಡೆದು ನಂತರ ಕ್ರೀಡಾ ಶಾಲೆಗೆ ಸೇರಿ ಕಠಿಣ ಪರಿಶ್ರಮ ನಿರಂತರ ಅಭ್ಯಾಸದ ಮೂಲಕ ಇಂದು ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪೂಜಿತ ಗೌಡ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ ಪೂಜಿತ ರವರ ಸ್ವ-ಗೃಹದಲ್ಲಿ ಅಭಿನಂದಿಸಿ ಗೌರವಿಸಿಲಾಯಿತು.
ಇದೇ ಸಂಧರ್ಭದಲ್ಲಿ ಪೂಜಿತ ರವರನ್ನು ಬೆಂಬಲಿಸಿ ರಾಷ್ಟ್ರ ಮಟ್ಟದ ಕ್ರೀಡಾಪಟುವಾಗಿ ಬೆಳಗಿ ನಾಡಿಗೆ ಕೀರ್ತಿ ತರಲು ಶ್ರಮಿಸಿದ ಪೋಷಕರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದವರೊಂದಿಗೆ ಮಾತನಾಡಿದ ಪೂಜಿತ ಇದುವರೆಗೆ 19 ಬಾರಿ ರಾಷ್ಟ್ರ ಮಟ್ಟದ ಹಾಕಿ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆತಿದ್ದು ಮುಂದಿನ ದಿನಗಳಲ್ಲಿ ಭಾರತ ದೇಶದ ಪರವಾಗಿ ಅಂತರ್ ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಭಾರತ ಹಾಗೂ ಕರ್ನಾಟಕದ ಹಾಕಿ ಕ್ರೀಡೆಯ ಪತಾಕೆಯನ್ನು ಹಾರಿಸಬೇಕೆಂಬ ಅಭಿಲಾಷೆಯನ್ನು ಹಂಚಿಕೊಂಡರು.
ರಿಪ್ಪನ್‌ಪೇಟೆ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರ ಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ.ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ.
ರಿಪ್ಪನ್ ಪೇಟೆಯ ಬರುವೆ ಗ್ರಾಮದ ಕಡು ಬಡ ಕುಟುಂಬದಲ್ಲಿ ಜನಿಸಿ ಕಷ್ಟ ಸುಖ, ನೋವುಗಳನ್ನು ನೋಡಿ ಕೃಷಿ ಆಧರಿಸಿ ಜೀವನ ಸಾಗಿಸಿಕೊಂಡು ಬಂದಂತಹ ನಾಗೇಶ್ ಗೌಡ ಪತ್ನಿ ಪೂರ್ಣಿಮಾ ಈ ದಂಪತಿಗಳ ಮಗಳಾದ ಕುಮಾರಿ ಪೂಜಿತ ಇಂದು ರಾಷ್ಟ್ರಮಟ್ಟದಲ್ಲಿ ರಿಪ್ಪನ್ ಪೇಟೆಯ ಕೀರ್ತಿಪತಾಕೆಯನ್ನು ಕ್ರೀಡಾಲೋಕದಲ್ಲಿ ಹಾರಿಸುತ್ತಿದ್ದಾಳೆ..
ಹೆಚ್ಚು ಅನುಕೂಲಸ್ಥರು ಅಲ್ಲದಿದ್ದರು ತನ್ನ ಮಗಳು ಈ ನಾಡಿಗೆ ಏನಾದರೂ ತನ್ನದೇ ಆದ ಸೇವೆ ಸಲ್ಲಿಸಬೇಕು ಎಂಬ ತಂದೆ-ತಾಯಿಯರ ಕನಸನ್ನು ಇಂದು ಪೂಜಿತ ನನಸಾಗಿಸಿದ್ದಾಳೆ.
ಕುಮಾರಿ ಪೂಜಿತಾ ತನ್ನ ಬಾಲ್ಯದ ಜೀವನವನ್ನು ರಿಪ್ಪನ್ ಪೇಟೆಯ ಸರಕಾರಿ ಬಾಲಕಿಯರ ಪಾಠಶಾಲೆಯಲ್ಲಿ ವ್ಯಾಸಂಗ ಮಾಡಿ ಮುಂದಿನ ವ್ಯಾಸಂಗಕ್ಕಾಗಿ ಶಿವಮೊಗ್ಗದ ಕ್ರೀಡಾ ಹಾಸ್ಟೆಲ್ ನಲ್ಲಿ 5 ನೇ ತರಗತಿ ಯಿಂದ ಏಳನೇ ತರಗತಿಯವರೆಗೆ ನಂತರ ಎಂಟರಿಂದ 10ನೇ ತರಗತಿ ಕ್ರೀಡಾ ಹಾಸ್ಟೆಲ್ ಮಡಿಕೇರಿಯಲ್ಲಿ ವ್ಯಾಸಂಗ ಮಾಡಿ ಪದವಿಯನ್ನು ಥೆರೆಶಿಯನ್ ಕಾಲೇಜ್ ಮೈಸೂರಿನಲ್ಲಿ ಮುಗಿಸಿದ್ದಾರೆ.
ಈಕೆಯ ದೃಢ ಅಚಲ ಸ್ಪರ್ಧಾ ಮನೋಭಾವ ಹಾಗೂ ಈ ನಾಡಿಗೆ ಕ್ರೀಡಾ ಕ್ಷೇತ್ರದಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲ ಇಂದು ರಾಷ್ಟ್ರಮಟ್ಟದಲ್ಲಿ ಹಾಕಿ ಕ್ಷೇತ್ರದಲ್ಲಿ ಗುರುತಿಸುವಂತೆ ಮಾಡಿದೆ.
ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಹಲವಾರು ಸಮಸ್ಯೆಗಳ ಮಧ್ಯೆ ಸಾವಿರಾರು ಸ್ಪರ್ಧಾಳುಗಳ ಮಧ್ಯೆ ಸ್ಪರ್ಧಿಸಿ ಗೆದ್ದು ಜಿಲ್ಲಾ, ರಾಜ್ಯ,ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡ ಈ ಪ್ರತಿಭೆಗೆ ಅಭಿನಂದನೆಗಳು.
ರಾಷ್ಟ್ರಮಟ್ಟದ ಕ್ರೀಡಾಪಟು ಪೂಜಿತ ರವರ ಸಂದರ್ಶನದ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇